ಶಬರಿಮಲೆ ಮಾಸಿಕ ಪೂಜೆ : ಹೊರಬಿತ್ತೊಂದು ಅಚ್ಚರಿಯ ವಿಚಾರ!

Published : Nov 08, 2018, 11:20 AM IST
ಶಬರಿಮಲೆ ಮಾಸಿಕ ಪೂಜೆ : ಹೊರಬಿತ್ತೊಂದು ಅಚ್ಚರಿಯ ವಿಚಾರ!

ಸಾರಾಂಶ

ಈ ಬಾರಿ ಮಾಸಿಕ ಪೂಜೆ ಹಿನ್ನೆಲೆಯಲ್ಲಿ ಶಬರಿಮಲೆ ದೇಗುಲವನ್ನು ತೆರೆದಿದ್ದು ಅತ್ಯಧಿಕ ಸಂಖ್ಯೆಯಲ್ಲಿ  ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ನೈಜ ಭಕ್ತರು ಇಲ್ಲಿಗೆ ಭೇಟಿ ನೀಡಿದ್ದರು ಎನ್ನುವ ಸಂಗತಿ ಬೆಳಕಿಗೆ ಬಂದಿದೆ. 

ಶಬರಿಮಲೆ :  ಶಬರಿ ಮಲೆ ದೇಗುಲವನ್ನು ಮಾಸಿಕ ಪೂಜೆಯ ಸಲುವಾಗಿ ನವೆಂಬರ್ 5 ಹಾಗೂ 6 ರಂದು ತೆರೆಯಲಾಗಿದ್ದು, ಈ ವೇಳೆ 7300 ಭಕ್ತರು ಶಬರಿಮಲೆಗೆ ಆಗಮಿಸಿದ್ದರು. 

ಆದರೆ ಇಷ್ಟು ಮಂದಿ ಭಕ್ತರಲ್ಲಿ ಕೇವಲ 200 ಮಂದಿ ಮಾತ್ರವೇ ಶ್ರದ್ಧಾ ಭಕ್ತಿಯಿಂದ ದೇವಾಲಯಕ್ಕೆ ಆಗಮಿಸಿದ್ದ ನೈಜ ಭಕ್ತರು ಎನ್ನುವ ವಿಚಾರ ಬೆಳಕಿಗೆ ಬಂದಿದೆ. 

ಪೊಲೀಸರ ವಿಶ್ಲೇಷಣೆ ವೇಳೆಯಲ್ಲಿ ಈ ವಿಚಾರ ತಿಳಿದು ಬಂದಿದ್ದು, ಈ ವೇಳೆ ದೇಗುಲಕ್ಕೆ  ಬಿಜೆಪಿ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರೂ ಕೂಡ ಆಗಮಿಸಿದ್ದರು ಎನ್ನಲಾಗಿದೆ. 

ಕಳೆದ ತಿಂಗಳೂ ಕೂಡ ಮಾಸಿಕ ಪೂಜೆ ಹಿನ್ನೆಲೆಯಲ್ಲಿ ದೇವಾಲಯದ ಬಾಗಿಲನ್ನು ತೆರೆದಿದ್ದು ಈ ವೇಳೆ ಸಾಕಷ್ಟು ಪ್ರಮಾಣದಲ್ಲಿ ಗಂಭೀರ ಗಲಭೆ ನಡೆದಿತ್ತು. ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಹಿಳೆಯರು ದೇಗುಲವನ್ನು ಪ್ರವೇಶಿಸಲು ಯತ್ನಿಸಿದ್ದರು. ಈ  ಬಾರಿಯೂ ಕೂಡ ಗಲಾಟೆ ನಡೆಯಬಹುದಾದ ನಿರೀಕ್ಷೆ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ
PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!