
ಅಮರಾವತಿ(ಜೂ.26): ರಾಜಕೀಯ ದ್ವೇಷವನ್ನೇ ಉಸಿರಾಡುವ ನೆರೆಯ ಆಂಧ್ರದಲ್ಲಿ ಹಾಲಿ ಮತ್ತು ಮಾಜಿ ಸಿಎಂ ನಡುವಿನ ವೈಮನಸ್ಸು ತಾರಕಕ್ಕೇರಿದೆ.
ನೂತನ ಸಿಎಂ ಸಿಎಂ ಜಗನ್ ಮೋಹನ್ ರೆಡ್ಡಿ ಮತ್ತು ಮಾಜಿ ಸಿಎಂ ಚಂದ್ರಬಾಬು ನಾಯ್ಡು ನಡುವಿನ ರಾಜಕೀಯ ಕದನದಲ್ಲಿ ಟಿಡಿಪಿಯ ಕಟ್ಟವೊಂದು ನೆಲಸಮವಾಗಿದೆ.
ಹೌದು, ಆಂಧ್ರದ ನೂತನ ರಾಜಧಾನಿ ಅಮರಾವತಿಯಲ್ಲಿ ಸುಮಾರು 8 ಕೋಟಿ ರೂ. ವೆಚ್ಛದಲ್ಲಿ ನಿರ್ಮಿಸಲಾಗಿದ್ದ ಟಿಡಿಪಿ ಕಚೇರಿ 'ಪ್ರಜಾವೇದಿಕಾ' ಕಟ್ಟಡವನ್ನು ಆಂಧ್ರ ಸರ್ಕಾರ ಧರೆಗುರುಳಿಸಿದೆ.
ನಾಯ್ಡುಗೆ ಆಘಾತ: ಸಿಎಂ ಕುರ್ಚಿ ಹೋಯ್ತು, ಈಗ ಮನೆಯೂ ಕಳೆದುಕೊಳ್ಳುವ ಸರದಿ!
ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸರ್ಕಾರ ರಚನೆ ಬಳಿಕ, ನಾಯ್ಡು ವಿರುದ್ಧ ಕೈಗೊಂಡ ಮೊದಲ ಕ್ರಮ ಇದಾಗಿದ್ದು ನಿನ್ನೆ(ಮಂಗಳವಾರ)ರಾತ್ರಿಯೇ ಕಟ್ಟಡ ನೆಲಸಮ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ಆಂಧ್ರಪ್ರದೇಶದ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಸಿಆರ್‌ಡಿಎ) ಕಟ್ಟಡವವನ್ನು ಸಂಪೂರ್ಣ ಕೆಡವಿ ಹಾಕಿದೆ. ಅಕ್ರಮವಾಗಿ ಈ ಕಟ್ಟಡವನ್ನು ಕಟ್ಟಲಾಗಿದ್ದು, ಈ ಹಿನ್ನೆಲೆಯಲ್ಲಿ ನೆಲಸಮ ಮಾಡಲಾಗಿದೆ ಎಂದು ಸಿಆರ್‌ಡಿಎ ಸ್ಪಷ್ಟಪಡಿಸಿದೆ.
ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ನಿವಾಸದ ಸಮೀಪದಲ್ಲೇ ಪ್ರಜಾ ವೇದಿಕೆ ಕಟ್ಟಡವನ್ನು 8 ಕೋಟಿ ರೂ. ವೆಚ್ಛದಲ್ಲಿ ನಿರ್ಮಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.