
ಮುಂಬೈ[ಜು.23]: ರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನ ಬಾಂದ್ರಾದಲ್ಲಿರುವ ಬೃಹತ್ ಕಟ್ಟಡವೊಂದರಲ್ಲಿ ಭಾರೀ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ದುರಂತಕ್ಕೀಡಾದ ಕಟ್ಟಡದಲ್ಲಿ ಸಿಲುಕಿಕೊಂಡಿದ್ದ 84 ಮಂದಿಯನ್ನು ರಕ್ಷಣೆ ಮಾಡಿದರು.
ಸೋಮವಾರ ಮಧ್ಯಾಹ್ನದ ಹೊತ್ತಿಗೆ ಕಟ್ಟಡದ ಮೂರು ಮತ್ತು ನಾಲ್ಕನೇ ಹಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಅಗ್ನಿ ಅನಾಹುತವನ್ನು ತಹಬದಿಗೆ ತರುವ ನಿಟ್ಟಿನಲ್ಲಿ 14 ಅಗ್ನಿಶಾಮಕ ವಾಹನಗಳು, ರೋಬೊಟ್ ಸೇರಿದಂತೆ ಆ್ಯಂಬುಲೆನ್ಸ್‌ಗಳು ಸಹ ಸ್ಥಳಕ್ಕೆ ದೌಡಾಯಿಸಿದ್ದವು.
ಈ ಬಗ್ಗೆ ಪ್ರತಿಕ್ರಿಯಿಸಿದ ಮಹಿಳೆಯೊಬ್ಬರು, ‘ನಾವಿದ್ದ ಕಟ್ಟಡದಲ್ಲೇ ಬೆಂಕಿ ಹೊತ್ತಿಕೊಂಡಿದ್ದನ್ನು ಕಂಡು ಗಾಬರಿಯಾದೆವು. ಈ ವೇಳೆ ಕಟ್ಟಡದಿಂದ ಹೊರಬರಲು ಮುಂದಾಗಿ, ಮೆಟ್ಟಿಲುಗಳನ್ನು ಹುಡುಕಿದೆವು. ಆದರೆ, ದಟ್ಟಹೊಗೆ ಹರಡಿಕೊಂಡಿದ್ದರಿಂದ ಸಾಧ್ಯವಾಗಲಿಲ್ಲ. ಈ ವೇಳೆ ನಮ್ಮನ್ನು ಅಗ್ನಿ ಶಾಮಕ ಸಿಬ್ಬಂದಿ ಸುರಕ್ಷಿತವಾಗಿ ಹೊರತಂದರು’ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.