ಶಿವಮೊಗ್ಗ ಉಪ ಸಮರ: 8500 ಹೊಸ ಮತದಾರರು

By Web DeskFirst Published Oct 28, 2018, 1:34 PM IST
Highlights

ಲೋಕಸಭಾ ಚುನಾವಣೆಯಲ್ಲಿ ಒಟ್ಟು 16,45,059 ಮತದಾರರು ಮತ ಹಕ್ಕು ಪಡೆದಿದ್ದಾರೆ. ಇವರಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿದ್ದು 8,27,111 ಇದ್ದು, ಪುರುಷರು 8,15,948 ಇದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಮತದಾರರ ಪಟ್ಟಿಗೆ ಹೋಲಿಸಿದರೆ ಹೊಸದಾಗಿ 8,500 ಮತದಾರರ ಸೇರ್ಪಡೆಯಾಗಿದೆ

ಶಿವಮೊಗ್ಗ[ಅ.28]: ಶಿವಮೊಗ್ಗ ಲೋಕಸಭಾ ಉಪ ಚುನಾವಣೆಗೆ ಜಿಲ್ಲಾಡಳಿತ ಸರ್ವ ಸನ್ನದಟಛಿವಾಗಿದ್ದು, ಈ ಬಾರಿ 8500 ಹೊಸ ಮತದಾರರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಾರೆ ಎಂದು ಡಿಸಿ ಕೆ.ಎ. ದಯಾನಂದ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಒಟ್ಟು 16,45,059 ಮತದಾರರು ಮತ ಹಕ್ಕು ಪಡೆದಿದ್ದಾರೆ. ಇವರಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿದ್ದು 8,27,111 ಇದ್ದು, ಪುರುಷರು 8,15,948 ಇದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಮತದಾರರ ಪಟ್ಟಿಗೆ ಹೋಲಿಸಿದರೆ ಹೊಸದಾಗಿ 8,500 ಮತದಾರರ ಸೇರ್ಪಡೆಯಾಗಿದೆ ಎಂದು ಹೇಳಿದರು.

20 ಸಾವಿರ ಅಧಿಕಾರಿ/ಸಿಬ್ಬಂದಿ: ಚುನಾವಣಾ ಕರ್ತವ್ಯಕ್ಕಾಗಿ ಸುಮಾರು 20 ಸಾವಿರ ದಷ್ಟು ಅಧಿಕಾರಿ/ಸಿಬ್ಬಂದಿ ನಿಯೋಜಿಸಲಾಗಿದೆ. ಮತಗಟ್ಟೆಗಳಲ್ಲಿ ನೇರವಾಗಿ 11 ಸಾವಿರ ಅಧಿಕಾರಿ/ಸಿಬ್ಬಂದಿ ಮತದಾನದ ದಿನ ಕರ್ತವ್ಯ ನಿರ್ವಹಿಸಲಿದ್ದಾರೆ. ಚುನಾವಣಾ ಬಂದೋಬಸ್ತ್‌ಗಾಗಿ ಈಗಾಗಲೇ 4 ಸಾವಿರಕ್ಕೂ ಅಧಿಕಾರಿ ಪೊಲೀಸ್ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದರು.

ಮತದಾನ ಪ್ರಮಾಣ ಹೆಚ್ಚಳಕ್ಕೆ ಕ್ರಮ: ಚುನಾವಣಾ ಅಧಿಕಾರಿಗಳು, ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಈ ಬಾರಿ ಚುನಾವಣಾ ಕರ್ತವ್ಯ ಪ್ರಮಾಣ ಪತ್ರ (ಇಡಿಸಿ) ಈಗಾಗಲೇ ಹಂಚಿಕೆ ಮಾಡಲಾಗಿದ್ದು, ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಿರೀಕ್ಷಿಸಲಾಗಿದೆ. ಸೇನಾಪಡೆಗಳಲ್ಲಿ ಕರ್ತವ್ಯ ನಿರ್ವಹಿಸುವ ಒಟ್ಟು 463 ಸರ್ವಿಸ್ ಮತದಾರರು ಇದ್ದು, ಅವರಿಗೆ ಈ ಬಾರಿ ಎಲೆಕ್ಟ್ರಾನಿಕ್ ಮಾಧ್ಯಮ (ಇಟಿಪಿಬಿಎಸ್) ಮೂಲಕ
ಮತದಾನ ಪತ್ರ ಕಳುಹಿಸಲಾ ಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ನಿರೀಕ್ಷಿಸಲಾಗಿದೆ ಎಂದು ಹೇಳಿದರು.

ವಾಹನಗಳ ಬಳಕೆ: ಸುಗಮ ಮತದಾನಕ್ಕಾಗಿ 337 ಬಸ್, 435 ಜೀಪ್, 16 ಲಾರಿ, 13 ಇತರ ವಾಹನಗಳು ಸೇರಿದಂತೆ ಒಟ್ಟು 803 ವಾಹನಗಳನ್ನು ಬಳಸಲಾಗುತ್ತಿದೆ. ಮತದಾನದ ಬಳಿಕ ಡಿಮಸ್ಟರಿಂಗ್ ಕೇಂದ್ರದಿಂದ ಮತ ಎಣಿಕೆ ಕೇಂದ್ರಕ್ಕೆ ಜಿಪಿಎಸ್ ಅಳವಡಿಸಿದ ಕಂಟೈನರ್ ಲಾರಿಯನ್ನು ಸೂಕ್ತ ಪೊಲೀಸ್ ಬಂದೋಬಸ್ತಿನೊಂದಿಗೆ ಬಳಸಲಾಗುವುದು ಎಂದರು.

ಮಾದರಿ ನೀತಿ ಸಂಹಿತೆ ಪಾಲನೆ
ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸಲಾಗಿದೆ. ಇದುವರೆಗೆ ಚುನಾವಣೆಗೆ ಸಂಬಂಧಿಸಿದಂತೆ 30 ಲಕ್ಷ ರು. ನಗದು, 3.78 ಕೋಟಿ ರು. ಮೌಲ್ಯದ ವಸ್ತುಗಳು, 59 ಲಕ್ಷ ರೂ. ಮೌಲ್ಯದ ಮದ್ಯ ಸೇರಿದಂತೆ ಒಟ್ಟು 4.67 ಕೋಟಿ ರು. ಮೌಲ್ಯದ ನಗದು, ವಸ್ತುಗಳನ್ನು ವಶಪಡಿಸಿ ಕೊಳ್ಳಲಾಗಿದೆ. ಚುನಾವಣಾ ಅಕ್ರಮ ಗಳ ಮೇಲೆ ನಿಗಾ ಇರಿಸಲು ಒಟ್ಟು 32 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ಹೇಳಿದರು.

ಮತದಾರರಿಗೆ ಸೂಚನೆ
ಮತದಾನ ನವೆಂಬರ್ 3ರಂದು ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ನಡೆಯಲಿದೆ. ಮತದಾರರ ಎಡಗೈ ತೋರುಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಚ್ಚಲು ಈಗಾಗಲೇ ಸೂಚನೆ ನೀಡಲಾಗಿದೆ. ಪೋಲಿಂಗ್ ಏಜೆಂಟರ ಸಮಕ್ಷಮದಲ್ಲಿ ಬೆಳಗ್ಗೆ 6 ಗಂಟೆಗೆ ಅಣಕು ಮತದಾನ ನಡೆಯಲಿದೆ. ಮತದಾನದ ದಿನ ದಂದು ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ನಿರ್ಬಂಧಿಸಲಾಗಿದೆ. ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಆಯೋಗ ನಿಗದಿ ಪಡಿಸಿರುವ ಯಾವುದೇ 12 ಭಾವ ಚಿತ್ರವಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ ಎಂದರು.
 

click me!