
ನವದೆಹಲಿ (ಮಾ.20): ಮನ್ರೇಗಾ ಯೋಜನೆಯಡಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಆರೋಪದಡಿಯಲ್ಲಿ ಫಲಾನುಭವಿಗಳ ಪಟ್ಟಿಯಿಂದ 87 ಲಕ್ಷ ಉದ್ಯೋಗ ಕಾರ್ಡನ್ನು ಗ್ರಾಮೀಣ ಅಭಿವೃದ್ಧಿ ಸಚಿವಾಲಯ ತೆಗೆದು ಹಾಕಿದೆ.
ಮನ್ರೇಗಾ ಯೋಜನೆಯಡಿ ಅನುದಾನವು ನಿಜವಾದ ಫಲಾನುಭವಿಗಳಿಗೆ ತಲುಪುತ್ತಿದೆಯೇ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯವು ಪರಿಶೀಲನೆ ನಡೆಸುತ್ತಿದೆ. ಇದರಲ್ಲಿ 87 ಲಕ್ಷ ನಕಲಿ ಕಾರ್ಡ್ ಗಳು ಪತ್ತೆಯಾಗಿವೆ. ಇವರಲ್ಲಿ ಕೆಲವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಯೋಜನೆಯಡಿ 12.49 ಕೋಟಿ ಉದ್ಯೋಗ ಕಾರ್ಡನ್ನು ನೀಡಲಾಗಿದೆ ಎಂದು ಕೇಂದ್ರ ಸಚಿವ ರಾಮ್ ಕೃಪಾಲ್ ಯಾದವ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.