
ಬೆಂಗಳೂರು (ಜ.11): ಇತ್ತೀಚೆಗೆ ಬೆಂಗಳೂರಿನ ಶಾಲೆಯೊಂದರಲ್ಲಿ ನಡೆದ ವಾರ್ಷಿಕೋತ್ಸವದಲ್ಲಿ ಅಲ್ಲಿನ ವೇದಿಕೆ ಮೇಲೆ ಕುಣಿಯುತ್ತಿದ್ದ ಮಕ್ಕಳಲ್ಲಿ 9 ಮಕ್ಕಳು ಮೃತಪಟ್ಟಿದ್ದಾರೆ.
ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಯಕ್ರಮದ ಸಂಘಟನಕಾರರ ಮತ್ತು ಶಾಲೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಈ ಘಟನೆ ಸಂಭವಿಸಿದೆ. ಈ ಬಗ್ಗೆ ಶಾಲೆ ಸಿಬ್ಬಂದಿಗಳಿಗೆ ಎಚ್ಚರಿಸಲೇಬೇಕಿದೆ. ಈ ಸಂದೇಶವನ್ನು ಪ್ರತಿಯೊಬ್ಬ ಪೋಷಕರಿಗೆ ತಲುಪುವ ತನಕ ಶೇರ್ ಮಾಡಿ ಎಂಬ ಅಡಿಬರಹವಿರುವ ವಿಡಿಯೋವೊಂದು ಸಾಮಾಜಿಕ ಜಾಲತಾ ಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ವೇದಿಕೆಯ ಮೇಲೆ ಡ್ಯಾನ್ಸ್ ಮಾಡುತ್ತಿದ್ದ ಮಕ್ಕಳ ಮೇಲೆ ಕಬ್ಬಿಣದ ಪಿಲ್ಲರ್ ಮಗುಚಿ ಬೀಳುತ್ತದೆ.
ಇತ್ತೀಚೆಗೆ ಬೆಂಗಳೂರಿನ ಶಾಲೆಯೊಂದರಲ್ಲಿ ಈ ರೀತಿಯ ದುರ್ಘಟನೆಯೊಂದು ನಿಜಕ್ಕೂ ನಡೆದಿದೆಯೇ ಎಂದು ತನಿಖೆ ನಡೆಸಿದಾಗ ಈ ವಿಡಿಯೋದ ಅಸಲಿ ಕತೆ ತಿಳಿಯಿತು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಇತ್ತೀಚಿನದ್ದಲ್ಲ. ಬದಲಾಗಿ ಫೆಬ್ರವರಿ 2016 ರಲ್ಲಿ ನಡೆದ ಘಟನೆ ಇದು. ಆ ಘಟನೆಯಲ್ಲಿ ೮ ಜನರಿಗೆ ಗಾಯಗಳಾಗಿದ್ದವೇ ಹೊರತು ಯಾರೂ ಕೂಡ ಮೃತಪಟ್ಟಿರಲಿಲ್ಲ. 2016 ರ ಫೆಬ್ರವರಿ 15 ರಂದು ಬೆಂಗಳೂರಿನ ಮ್ಯಾಕ್ಸ್‌ಮುಲ್ಲರ್ ಪ್ರೌಢಶಾಲೆ ಮತ್ತು ಕಾರ್ಯಕ್ರಮದ ಸಂಘಟಕರು ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಳ್ಳದೇ ಇರುವುದರಿಂದ ಈ ಘಟನೆ ನಡೆದಿತ್ತು. ಸುಮಾರು ೮.೩೦ರ ವೇಳೆಗೆ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಿರಲಿಲ್ಲ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.