
ನವದೆಹಲಿ(ಜ.20): ಇಲ್ಲಿನ ಭವಾನ ಕೈಗಾರಿಕಾ ಪ್ರದೇಶದ ಪ್ಲಾಸ್ಟಿಕ್ ಕಾರ್ಖಾನೆಯ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 17 ಮಂದಿ ಸಜೀವ ದಹನವಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ವರದಿಗಳ ಪ್ರಕಾರ ಗೋದಾಮಿನ ಒಳಗೆ ಇನ್ನು ಹಲವು ಮಂದಿ ಇದ್ದಾರೆ ಎನ್ನಲಾಗಿದೆ. ಆದಾಗ್ಯೂ ಕಾರ್ಯಾಚರಣೆ ನಡೆಯುತ್ತಿದ್ದು, ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿರುವುದರಿಂದ ಸುತ್ತಮುತ್ತಲಿನ ಜನರನ್ನು ಸ್ಥಳಾಂತರಿಸಲಾಗಿದೆ. 10 ಅಗ್ನಿ ಶಾಮಕ ವಾಹನ ಬೆಂಕಿ ಆರಿಸಲು ಕಾರ್ಯಾಚರಣೆ ನಡೆಸುತ್ತಿದೆ.
ಅಗ್ನಿ ಶಾಮಕ ದಳದ ಸಿಬ್ಬಂದಿ 9 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದರೆ, ದೆಹಲಿ ಪೊಲೀಸ್ ಕೇವಲ ಮೂರು ಮಂದಿ ಮಾತ್ರ ಸಾವಿಗೀಡಾಗಿರುವುದಾಗಿ ತಿಳಿಸಿ ಮೃತರ ಸಂಖ್ಯೆ ಹೆಚ್ಚು ಸಾಧ್ಯತೆಯಿದೆ ಎಂದು ತಿಳಿಸಿದೆ. ಇತ್ತೀಚಿನ ದಿನಗಳಲ್ಲಿ ಅಗ್ನಿ ಸಂಬಂಧಿತ ಅವಘಡಗಳು ಹೆಚ್ಚುತ್ತಿವೆ.
ಬೆಂಗಳೂರಿನಲ್ಲಿ ಜನವರಿ 8ರಂದು ಬಾರ್' ಒಂದರಲ್ಲಿ ಬೆಂಕಿ ಹೊತ್ತಿಕೊಂಡು 5 ಮಂದಿ ಮೃತಪಟ್ಟರೆ ಮುಂಬೈ'ನಲ್ಲಿ ಕಳೆದ ವರ್ಷದ ಡಿಸೆಂಬರ್' 28 ರಂದು 14 ಮಂದಿ ಸಾವನ್ನಪ್ಪಿದ್ದರು.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.