
ಕೊಲಂಬೋ(ಜೂ.04): ಮಹತ್ವದ ಬೆಳವಣಿಗೆಯೊಂದರಲ್ಲಿ ಶ್ರೀಲಂಕಾದಲ್ಲಿ ಈಸ್ಟರ್ ಹಬ್ಬದಂದು ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, 9 ಮುಸ್ಲಿಂ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈಸ್ಟರ್ ಆತ್ಮಾಹುತಿ ದಾಳಿ ನಡೆಸಿದ ಇಸ್ಲಾಮಿಕ್ ಸಂಘಟನೆಯೊಂದಿಗೆ ಈ 9 ಸಚಿವರು ನಿಕಟ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಆತ್ಮಾಹುತಿ ದಾಳಿ ನಡೆಸಿದ ನ್ಯಾಷನಲ್ ಥೌಹೀತ್ ಜಮಾತ್ (ಎನ್‌ಟಿಜೆ) ನಿಷೇಧಿತ ಉಗ್ರ ಸಂಘಟನೆ ಜೊತೆಗೆ ಈ ಸಚಿವರು ಸಂಪರ್ಕ ಹೊಂದಿದ್ದರು ಎನ್ನಲಾಗಿದ್ದು, ಇವರ ರಾಜೀನಾಮೆಗೆ ಆಗ್ರಹ ಹೆಚ್ಚಾಗಿತ್ತು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಆರೋಪ ಎದುರಿಸುತ್ತಿದ್ದ 9 ಸಚಿವರು ರಾಜೀನಾಮೆ ನೀಡಿದ್ದಾರೆ.
225 ಸದಸ್ಯ ಬಲ ಹೊಂದಿರುವ ಲಂಕಾ ಸಂಸತ್ ನಲ್ಲಿ 19 ಮುಸ್ಲಿಂ ಸಂಸದರಿದ್ದು, ಈ ಪೈಕಿ 9 ಜನ ಕ್ಯಾಬಿನೆಟ್, ರಾಜ್ಯ ಹಾಗೂ ಡೆಪ್ಯುಟಿ ಸಚಿವರಾಗಿ ನೇಮಕಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.