ಪುಣೆ: ಕಾರು ಟ್ರಕ್ ನಡುವೆ ಭೀಕರ ಅಪಘಾತ: 9 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

Published : Jul 20, 2019, 02:30 PM ISTUpdated : Jul 20, 2019, 02:31 PM IST
ಪುಣೆ: ಕಾರು ಟ್ರಕ್ ನಡುವೆ ಭೀಕರ ಅಪಘಾತ: 9 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಸಾರಾಂಶ

ಪುಣೆ ಹೆದ್ದಾರಿಯಲ್ಲಿ ಭೀಕರ ಅಪಘಾತ| ಕಾರು ಹಾಗೂ ಟ್ರಕ್ ನಡುವೆ ಡಿಕ್ಕಿ, 9 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು!

ಪುಣೆ[ಜು.20]: ಮಹಾರಾಷ್ಟ್ರದ ಪುಣೆ- ಸೋಲಾಪುರ  ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತವೊಂದು ನಡೆದಿದೆ. ಕಾರು ಹಾಗೂ ಟ್ರಕ್ ನಡುವೆ ನಡೆದ ಡಿಕ್ಕಿಯಲ್ಲಿ 9 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 

ಶುಕ್ರವಾರ ರಾತ್ರಿ ಸುಮಾರು 1.30ಗೆ ಈ ಅಪಘಾತ ಸಂಭವಿಸಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿದ್ದೇ ಈ ದುರಂತಕ್ಕೆ ಕಾರಣವೆನ್ನಲಾಗಿದೆ. ಕಾರಿನಲ್ಲಿದ್ದವರು ಸೋಲಾರ್ ಪುರದೆಡೆ ಪ್ರಯಾಣಿಸುತ್ತಿದ್ದರು. ಈ ವೇಳೆ ಪುಣೆಯಿಂದ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆದಿದೆ. 

ಘಟನೆ ಸಂಬಂಧ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರು 'ಘಟನೆಯಲ್ಲಿ ಮೃತಪಟ್ಟವರೆಲ್ಲರೂ ಪುಣೆಯ ಯಾವತ್ ನಿವಾಸಿಗಳಾಗಿದ್ದರು. ಇವರೆಲ್ಲರೂ 19-23 ವಯಸ್ಸಿನವರು. ಕಾರು ಬಹಳ ವೇಗವಾಗಿ ಚಲಾಯಿಸುತ್ತಿದ್ದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾರೆ. ಹೀಗಾಗಿ ಕಾರು ಮೊದಲು ಡಿವೈಡರ್ ಗೆ ಹೊಡೆದು ಬಳಿಕ ಪಕ್ಕದ ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದೆ' ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು