
ನವದೆಹಲಿ(ಮಾ.10): ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಸಮಬಲದ ಸಾಧಿಸಲಿವೆ ಎಂಬ ಚುನಾವಣೋತ್ತರ ಸಮೀಕ್ಷೆಯ ಭವಿಷ್ಯವನ್ನು ಕ್ರಿಕೆಟಿಗ ಹಾಗೂ ಕಾಂಗ್ರೆಸ್ಸಿಗ ನವಜೋತ್ ಸಿಂಗ್ ಸಿಧು ಅಲ್ಲಗಳೆದಿದ್ದಾರೆ.
ಆಮ್ ಆದ್ಮಿ ಪಕ್ಷ ಕಾಂಗ್ರೆಸ್'ಗೆ ಪೈಪೋಟಿ ನೀಡಿದರೂ 40ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ. ಬಿಜೆಪಿ ಮತ್ತು ಅಕಾಲಿದಳಕ್ಕೆ 10 ಸ್ಥಾನ ದೊರೆತರೆ ಅದೇ ಜಾಸ್ತಿ. ಉಳಿದ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
1.5 ಲಕ್ಷಕ್ಕಿಂತ ಹೆಚ್ಚು ಮತದಾರರು ಇರುವ ಕ್ಷೇತ್ರವನ್ನು ಕೇವಲ 20,000 ಮಾದರಿಗಳನ್ನು ಇಟ್ಟುಕೊಂಡು ಯಾರು ಗೆಲ್ಲಲಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಸಮೀಕ್ಷೆಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.