ತಮ್ಮ ಊರಿಗೆ ಪ್ರೌಢಶಾಲೆ ಬೇಕೆಂದು ರಕ್ತದಲ್ಲಿ ಮೋದಿಗೆ ಪತ್ರ ಬರೆದ ಯುವಕ

By Suvarna Web DeskFirst Published Apr 6, 2018, 8:47 AM IST
Highlights

ತಮ್ಮ ಪಟ್ಟಣಕ್ಕೆ ಸರ್ಕಾರಿ ಪ್ರೌಢಶಾಲೆ ಬೇಕು ಎಂದು ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾನೆ. 

ವಿಜಯಪುರ (ಏ. 06):  ತಮ್ಮ ಪಟ್ಟಣಕ್ಕೆ ಸರ್ಕಾರಿ ಪ್ರೌಢಶಾಲೆ ಬೇಕು ಎಂದು ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾನೆ. 

ಮುದ್ದೇಬಿಹಾಳ ತಾಲೂಕಿನ ನಾಲತವಾಡ ನಿವಾಸಿ ವಿಜಯರಂಜನ ಜೋಶಿ ರಕ್ತದಲ್ಲಿ ಮೋದಿಗೆ ಪತ್ರ ಬರೆದು ಅಚ್ಚರಿ ಮೂಡಿಸಿದ್ದಾನೆ.  ಹತ್ತು ಹದಿನೈದು ಸಾವಿರ ಜನಸಂಖ್ಯೆ ಇರುವ ನಾಲತವಾಡ ಪಟ್ಟಣದಲ್ಲಿ ಸರ್ಕಾರಿ ಪ್ರೌಢ ಶಾಲೆ, ಕಾಲೇಜುಗಳು ಯಾವುದೂ ಇಲ್ಲ. ನಾಲತವಾಡದಲ್ಲಿ ಸರ್ಕಾರಿ ಪ್ರೌಢಶಾಲೆ, ಕಾಲೇಜು ನಿರ್ಮಿಸುವಂತೆ ಶಿಕ್ಷಣ ಇಲಾಖೆಗೆ, ಶಿಕ್ಷಣ ಸಚಿವರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದರೂ ಪ್ರಯೋಜನವಾಗಿಲ್ಲ. ರಾಜ್ಯ ಸರ್ಕಾರ ಸತ್ತು ಶವವಾಗಿದೆ ಎಂದು ಪ್ರಧಾನಿಗೆ  ವಿಜಯರಂಜನ ಪತ್ರ ಬರೆದಿದ್ದಾನೆ.  ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ. 

ಹತ್ತಾರು ಹಳ್ಳಿಗಳಿಂದ ದೂರ ಹೋಗಿ ವಿದ್ಯಾರ್ಥಿಗಳು ಕಾಲೇಜು  ಕಲಿಯಲು ಆಗುತ್ತಿಲ್ಲ. ಉತ್ತರ ಕರ್ನಾಕಟಲ್ಲಿ ಬರಗಾಲ, ಬಡತನ ಇರುವುದರಿಂದ ಖಾಸಗಿ ಶಾಲೆಯಲ್ಲಿ ಕಲಿಸುವಷ್ಟು ಶ್ರೀಮಂತರಲ್ಲ ಇಲ್ಲಿನ ಜನರು.  ಸರ್ಕಾರಿ ಶಾಲೆ ಇಲ್ಲದೆ, ಶಿಕ್ಷಣ ಸಿಗದ ಕಾರಣ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿದೆ. ನನಗೆ ತುಂಬ ನೋವಾಗಿದೆ, ನೀವಾದ್ರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತೀರಿ ಎಂಬ ನಂಬಿಕೆ ಮೇಲೆ ಪತ್ರ ಬರೆದಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾನೆ. 
 

click me!