
ಬೆಂಗಳೂರು(ಮಾ.24): ಇಡೀ ದೇಶದಲ್ಲೇ ಸದ್ದು ಮಾಡಿದ್ದ ಬಳ್ಳಾರಿ ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿಗಳು ಒಬ್ಬೊಬ್ಬರಾಗಿ ಖುಲಾಸೆಗೊಳ್ಳುತ್ತಾ ಹೋಗುತ್ತಿದ್ದಾರೆ. ಅದರಲ್ಲೂ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಇದ್ದ ಇಡಿ ಕೇಸ್ ವಜಾಗೊಂಡಿದೆ. ಈ ಕುರಿತಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಹೆಚ್'ಡಿಕೆ ಹೊಸ ಬಾಂಬ್!
ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಧನಾ ಸಮಾವೇಶದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿಗೆ ಶಾಕ್ ನೀಡುವಂತ ಹೇಳಿಕೆಯನ್ನು ನೀಡಿದ್ದಾರೆ.ಮುಂದಿನ ವಿಧಾನಸಭೆಗೆ ಇನ್ನು ಹತ್ತು ತಿಂಗಳು ಮಾತ್ರ ಬಾಕಿಯಿದೆ.ಈ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಬರೋಬ್ಬರಿ 150 ಸೀಟು ಗೆದ್ದು ಅಧಿಕಾರಕ್ಕೇರುವ ಕನಸು ಕಾಣುತ್ತಿದೆ. ಇತ್ತ ತನ್ನ ವಿರುದ್ಧ ದಾಖಲಾಗಿರುವ ಕೇಸ್ ಗಳಲ್ಲಿ ಮುಕ್ತಿ ಪಡೆಯಲು ಜನಾರ್ದನ ರೆಡ್ಡಿ ಪ್ಲಾನ್ ಮಾಡಿದ್ದಾರಂತೆ. ತನ್ನ ವಿರುದ್ಧದ ಕೇಸ್ ಗಳಿಂದ ಖುಲಾಸೆಗೊಳಿಸಿದರೆ, ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಬಿಜೆಪಿ ಪಕ್ಷಕ್ಕೆ 500 ಕೋಟಿ ರೂಪಾಯಿ ಕೊಡಲು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆಪಾದನೆ ಮಾಡಿದ್ದಾರೆ.
ಇದು ರಾಜಕೀಯ ವಲಯದಲ್ಲಿ ಸಂಚಲನವನ್ನು ಉಂಟು ಮಾಡಿದ್ದು, ಹೆಚ್ ಡಿಕೆ ಆರೋಪಕ್ಕೆ ಬಿಜೆಪಿ ಪ್ರತಿಕ್ರಿಯೆ ಏನು ಎಂಬುದು ಇದೀಗ ಕುತೂಹಲವನ್ನು ಉಂಟು ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.