
ಕೊಪ್ಪಳ(ಜೂ.18): ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮದ ಯುವ ರೈತ ವಿಜಯ್ ಎಂಬಾತರ ಜಮೀನಿನಲ್ಲಿ 11 ಕೆ ವಿ ವಿದ್ಯುತ್ ಲೈನ್ ಹಾದುಹೋಗಿದೆ. ಆದರೆ, ವಿದ್ಯುತ್ ಲೈನ್ ಇರುವ ಕಂಬವೊಂದು ಕುಸಿಯುವ ಭೀತಿಯಲ್ಲಿದೆ. ಈ ಹಿನ್ನಲೆಯಲ್ಲಿ ಇದನ್ನು ಸರಿಪಡಿಸುವಂತೆ ಸಾಕಷ್ಟು ಬಾರಿ ಜೇಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದ್ರೆ ಅಧಿಕಾರಿಗಳು ಮಾತ್ರ ಪ್ರತಿಕ್ರಿಯಿಸಿರಲಿಲ್ಲ. ಹೀಗಾಗಿ ರೈತ ವಿಜಯ ಕೊನೆಗೆ ಬೇಸತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ವಿಟ್ ಮಾಡುವ ಮೂಲಕ ತನ್ನ ಸಮಸ್ಯೆ ಹೇಳಿಕೊಂಡಿದ್ದಾನೆ.
ಯಾವಾಗ ಪ್ರಧಾನಿಗೆ ರೈತ ವಿಜಯ್ ಟ್ವೀಟ್ ಮಾಡಿದ್ದಾನೆ ಎಂದು ಗೋತ್ತಾಯಿತೋ, ಆಗ ಎಚ್ಚೆತ್ತುಕೊಂಡು ಜೇಸ್ಕಾಂ ಇಲಾಖೆ ಅಧಿಕಾರಿಗಳು ವಿದ್ಯುತ್ ಕಂಬ ಹಾಕಿಕೊಡುವುದಾಗಿ ಹೇಳಿದ್ದಾರೆ. ಇನ್ನು ಮೋದಿಗೆ ಟ್ವೀಟ್ ಮಾಡಿರುವ ಸುದ್ದಿ ತಿಳಿಯುತ್ತಲೇ ಜೇಸ್ಕಾಂ ಇಲಾಖೆಯ ಅಧಿಕಾರಿಗಳು ರೈತ ವಿಜಯ್ ಫೋನ್ ಮಾಡಿ ನಾಳೆಯೊಳಗೆ ಸಮಸ್ಯೆ ಬಗೆಹರಿಸುತ್ತೇವೆ ಹೆಚ್ಚಿಗೆ ಏನೂ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
ಒಟ್ಟಿನಲ್ಲಿ ಮೋದಿಯ ಡಿಜಿಟಲ್ ಕ್ರಾಂತಿಯ ಪರಿಣಾಮ ರೈತರು ನೇರವಾಗಿ ತಮ್ಮ ಸಮಸ್ಯೆಯನ ಪ್ರಧಾನಿಗೆ ಹೇಳಿಕೊಂಡು, ಸೋಮಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾನೆ ಈ ರೈತ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.