
ನವದೆಹಲಿ (ಮಾ.27): ತೆರಿಗೆ ರಿಟರ್ನ್ಸ್ ಮತ್ತು ಪಾನ್ ಕಾರ್ಡ್ ಗೆ ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸ ಹೊರಟಿರುವ ಸರ್ಕಾರದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅಸಮಾಧಾನ ವ್ಯಕ್ತಪಡಿಸುತ್ತಾ, ಸರ್ಕಾರವು ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘಿಸುತ್ತಿದೆ ಎಂದರು. ಈ ಸಂಬಂಧ ವಿತ್ತ ಸಚಿವ ಅರುಣ್ ಜೇಟ್ಲಿಯವರಿಂದ ಸಮಜಾಯಿಷಿ ಕೇಳಿದರು.
ಆಧಾರ್ ಕಾರ್ಡ್ ಡಾಟಾಗಳನ್ನು ಹ್ಯಾಕ್ ಮಾಡಿ ಬ್ಯಾಂಕ್ ವ್ಯವಹಾರಗಳನ್ನು ನಡೆಸಬಹುದು. ಆ ವ್ಯಕ್ತಿಯ ಪ್ರಯಾಣದ ದಾಖಲೆಗಳು, ವೈಯಕ್ತಿಕ ವಿವರಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು. ಪೆಂಟಗಾನನ್ನು ಹ್ಯಾಕ್ ಮಾಡಿರುವಾಗ ಇದನ್ನೇಕೆ ಮಾಡಲು ಸಾಧ್ಯವಾಗಲಾರದು? ಎಂದು ಕಲಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.
ಯುಪಿಎ ಸರ್ಕಾರವಿದ್ದಾಗ, ಸರ್ಕಾರದ ಯೋಜನೆಗಳು, ಪಿಡಿಎಸ್, ಸಬ್ಸಿಡಿಗಳು ಜನರಿಗೆ ತಲುಪುವ ಬಗ್ಗೆ ಖಾತ್ರಿಪಡಿಸಿಕೊಳ್ಳಲು ಆಧಾರ್ ಕಾರ್ಡನ್ನು ಜಾರಿಗೆ ತರಲಾಗಿತ್ತು. ಆದರೆ ಇದೀಗ ಬೇರೆ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ. ನಾವು ಪೊಲೀಸ್ ರಾಜ್ಯದಲ್ಲಿ ಬದುಕುತ್ತಿದ್ದೇವೆ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.