
ಬಸ್ತರ್: ಪ್ರಧಾನಿ ನರೇಂದ್ರ ಮೋದಿ ರೀತಿ ಕಾಣುತ್ತ ಬಿಜೆಪಿ ಹಾಗೂ ಮಿತ್ರಪಕ್ಷಗಳ ಚುನಾವಣಾ ಪ್ರಚಾರ ರ್ಯಾಲಿಗಳಲ್ಲಿ ಗಮನ ಸೆಳೆಯುತ್ತಿದ್ದ ಅಭಿನಂದನ್ ಪಾಠಕ್ ಅವರು ಈಗ ಕಾಂಗ್ರೆಸ್ ಸೇರಿದ್ದು, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ನ ನೆಚ್ಚಿನ ಪ್ರಚಾರಕರಾಗಿ ಹೊರ ಹೊಮ್ಮಿದ್ದಾರೆ.
‘ಅಚ್ಛೇ ದಿನ್ ಬರಲ್ಲ’ ಎಂದು ಖಚಿತ ಗೊಂಡ ಕಾರಣ ಕಾಂಗ್ರೆಸ್ ಸೇರಿದೆ ಎಂದರು. ಪ್ರಚಾರ ರ್ಯಾಲಿಗಳಲ್ಲಿ ಅವರು ಮೋದಿ ರೀತಿ ಹಾವಭಾವದಲ್ಲಿ ನಟಿಸಿ, ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರೆ.
ಕೆಲವೇ ದಿನಗಳ ಹಿಂದಷ್ಟೇ ಅಭಿನಂದನ್ ಪಾಟಕ್ ಅವರು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪರ ಪ್ರಚಾರ ಮಾಡುವುದಾಗಿ ಘೋಷಿಸಿಕೊಂಡಿದ್ದರು. ಕೇಂದ್ರ ಸರ್ಕಾರ ಭರವಸೆಗಳನ್ನಷ್ಟೇ ನೀಡಿ ಅದನ್ನು ಸಫಲ ಮಾಡುವಲ್ಲಿ ವಿಫಲವಾಗಿದೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ