
ಮೈಸೂರು : ಸಿಎಂ ಸ್ವ ಕ್ಷೇತ್ರ ವರುಣಾದಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ವರುಣಾ ಕ್ಷೇತ್ರದಲ್ಲಿ ಸಂಭವನೀಯ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಟಾಂಗ್ ನೀಡಲು ಹೊಸ ಅಭ್ಯರ್ಥಿಯನ್ನು ಸಜ್ಜು ಮಾಡಿದೆ. ಅಭಿಷೇಕ್ ಎನ್ನುವವರಿಗೆ ಜೆಡಿಎಸ್ ಟಿಕೆಟ್ ನೀಡಿದೆ.
ಈ ಬಗ್ಗೆ ಮಾತನಾಡಿದ ಜೆಡಿಎಸ್ ಅಭ್ಯರ್ಥಿಯಾಗಿರುವ ಅಭಿಷೇಕ್ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿದೆ. 2018ನೇ ಸಾಲಿನ ಚುನಾವಣೆಯಲ್ಲಿ ವರುಣಾದಲ್ಲಿ ಅಚ್ಚರಿ ಫಲಿತಾಂಶ ಬರಲಿದೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ 20 ತಿಂಗಳ ಆಡಳಿತ ನನಗೆ ಶ್ರೀ ರಕ್ಷೆಯಾಗಿದೆ. ಇಲ್ಲಿನ ಜನ ನನಗೆ ಆಶಿರ್ವಾದ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.