
ಚಿಕ್ಕಮಗಳೂರು(ಜ.11): ನೇಣು ಬಿಗಿದು ಕೊಂಡು ಎಬಿವಿಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ. ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಜನವರಿ 7ರಂದು ಶೃಂಗೇರಿಯಲ್ಲಿ ಹುತಾತ್ಮ ಯೋಧರಿಗೆ ನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಆ ಸಮಾರಂಭಕ್ಕೆ ಚಕ್ರವರ್ತಿ ಸೂಲಿಬೆಲೆ ಬರಬೇಕಿತ್ತು. ಆದರೆ ಸೂಲಿಬೆಲೆ ಬರದಂತೆ ಎನ್ಎಸ್'ಯುಐ ಕಾರ್ಯಕರ್ತರು ಪತ್ರಿಕಾಗೋಷ್ಠಿ ನಡೆಸಿದ್ದರು. ಹೀಗಾಗಿ ಎಬಿವಿಪಿ ಕಾರ್ಯಕರ್ತರು ಹಾಗೂ ಎನ್'ಎಸ್'ಯುಐ ಕಾರ್ಯಕರ್ತರ ನಡುವೆ ಜಗಳವಾಗಿತ್ತು. ಗಲಾಟೆ ಸಂಬಂಧ ಎಬಿವಿಪಿಯ 4 ಕಾರ್ಯಕರ್ತರ ವಿರುದ್ಧ ದೂರು ಕೂಡ ದಾಖಲಾಗಿತ್ತು. ಆ ನಾಲ್ವರಲ್ಲಿ ಅಭಿಷೇಕ್ ಕೂಡ ಒಬ್ಬನಾಗಿದ್ದ. ಹೀಗಾಗಿ ತನ್ನ ಜೀವನ ಹಾಳಾಯ್ತು ಅಂತಾ ಡೆಟ್ನೋಟ್ ಬರೆದಿಟ್ಟು ಯುವಕ ಅಭಿಷೇಕ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇನ್ನು ಘಟನೆ ಖಂಡಿಸಿ ಶೃಂಗೇರಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.