
ಜೈಪುರ: ಕಳೆದ ಏಪ್ರಿಲ್‌ನಲ್ಲಿ ರಾಜಸ್ಥಾನದಲ್ಲಿ ಗೋರಕ್ಷಣೆ ಹೆಸರಲ್ಲಿ ನಡೆದಿದ್ದ ಕೃಷಿಕ ಪೆಹ್ಲು ಖಾನ್ ಹತ್ಯೆ ಪ್ರಕರಣದ 6 ಆರೋಪಿಗಳಿಗೆ ರಾಜಸ್ಥಾನ ಪೊಲೀಸರು ಕ್ಲೀನ್‌ಚಿಟ್ ನೀಡಿದ್ದಾರೆ.
ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪಿಗಳ ವಿರುದ್ಧ ತನಿಖೆಯನ್ನು ಕೈಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆದರೆ ಪೊಲೀಸರ ಈ ಕ್ರಮ ತೀವ್ರ ವಿವಾದಕ್ಕೆ ಕಾರಣವಾಗಿದೆ. ಶಂಕಿತ ಗೋ ರಕ್ಷಕರನ್ನು ರಕ್ಷಿಸುವುದಕ್ಕೆ ಸರ್ಕಾರದಿಂದ ಒತ್ತಡವಿರುವ ಹಿನ್ನೆಲೆಯಲ್ಲಿ, ಅಧಿಕಾರಿಗಳು ಈ ಕ್ರಮ ಕೈಗೊಂಡಿ ದ್ದಾರೆ ಎಂಬ ಆಪಾದನೆ ಕೇಳಿ ಬಂದಿದೆ.
ಹೈನುಗಾರಿಕೆ ನಡೆಸುತ್ತಿದ್ದ ಖಾನ್ ಅಗತ್ಯ ಪರವಾನಿಗೆ ಪಡೆದು ಗೋವುಗಳನ್ನು ಮಾರುಕಟ್ಟೆಯಿಂದ ಮನೆಗೆ ಸಾಗಿಸುತ್ತಿದ್ದ ವೇಳೆ ಅಲ್ವಾರ್‌ನಲ್ಲಿ ದಾಳಿ ನಡೆದಿತ್ತು. ಸಾಯುವ ಮುನ್ನ ಎಲ್ಲಾ 6 ಆರೋಪಿಗಳ ಹೆಸರನ್ನೂ ಪೆಹ್ಲು ಹೇಳಿದ್ದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.