ಬೆಳ್ಳಂಬೆಳಗ್ಗೆ ಬಾರ್ ತೆರೆದರೆ ಪರವಾನಗಿ ರದ್ದು

Published : Oct 02, 2017, 11:38 AM ISTUpdated : Apr 11, 2018, 12:49 PM IST
ಬೆಳ್ಳಂಬೆಳಗ್ಗೆ ಬಾರ್ ತೆರೆದರೆ ಪರವಾನಗಿ ರದ್ದು

ಸಾರಾಂಶ

ಬೆಳಗ್ಗೆ 10 ಗಂಟೆಗೂ ಮೊದಲೇ ತೆರೆಯುವ ಮದ್ಯದಂಗಡಿಗಳ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಎಚ್ಚರಿಕೆ ನೀಡಿದ್ದಾರೆ. ಸುವರ್ಣ ಸುದ್ದಿವಾಹಿನಿಯಲ್ಲಿ ಭಾನುವಾರ ‘ಹಲೋ ಮಿನಿಸ್ಟರ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಹಲವು ನಗರಗಳಲ್ಲಿ ಬೆಳಗಿನ ಜಾವ 4.30ಕ್ಕೆ ಮದ್ಯದಂಗಡಿಗಳನ್ನು ತೆರೆಯುವ ಬಗ್ಗೆ ದೂರುಗಳು ಕೇಳಿಬಂದಿವೆ. ಇದರಿಂದ ಶ್ರಮಿಕ ವರ್ಗ ವ್ಯಸನಿಗಳಾಗುತ್ತಿರುವ ಪರಿಣಾಮ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಬೆಳಗ್ಗೆ 10 ಗಂಟೆ ನಂತರ ಮಳಿಗೆ ತೆರೆಯುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರು: ಬೆಳಗ್ಗೆ 10 ಗಂಟೆಗೂ ಮೊದಲೇ ತೆರೆಯುವ ಮದ್ಯದಂಗಡಿಗಳ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಎಚ್ಚರಿಕೆ ನೀಡಿದ್ದಾರೆ.

ಸುವರ್ಣ ಸುದ್ದಿವಾಹಿನಿಯಲ್ಲಿ ಭಾನುವಾರ ‘ಹಲೋ ಮಿನಿಸ್ಟರ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಹಲವು ನಗರಗಳಲ್ಲಿ ಬೆಳಗಿನ ಜಾವ 4.30ಕ್ಕೆ ಮದ್ಯದಂಗಡಿಗಳನ್ನು ತೆರೆಯುವ ಬಗ್ಗೆ ದೂರುಗಳು ಕೇಳಿಬಂದಿವೆ. ಇದರಿಂದ ಶ್ರಮಿಕ ವರ್ಗ ವ್ಯಸನಿಗಳಾಗುತ್ತಿರುವ ಪರಿಣಾಮ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಬೆಳಗ್ಗೆ 10 ಗಂಟೆ ನಂತರ ಮಳಿಗೆ ತೆರೆಯುವಂತೆ ಸೂಚನೆ ನೀಡಲಾಗಿದೆ.

ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದರು. ಒಂದೆಡೆ ಸರ್ಕಾರದ ಬೊಕ್ಕಸಕ್ಕೆ ಆದಾಯ ತರಬೇಕು, ಮತ್ತೊಂದೆಡೆ ರಾಜ್ಯದ ಜನರ ಆರೋಗ್ಯ ವೃದ್ಧಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕಿದೆ. ಅದಕ್ಕಾಗಿಯೇ ಮದ್ಯ ವ್ಯಸನಿಗಳನ್ನು ತಿದ್ದುವ ಸಲುವಾಗಿ ಡಿ ಅಡಿಕ್ಷನ್ ಸೆಂಟರ್‌ಗಳಿಗೆ ಆದ್ಯತೆ ನೀಡಲಾಗುತ್ತಿದೆ. ತಡರಾತ್ರಿಯವರೆಗೂ ನಡೆಯುವ ಸರ್ವೀಸ್ ಬಾರ್‌ಗಳಿಗೂ ಕಡಿವಾಣ ಹಾಕಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಕಿರಾಣಿ ಅಂಗಡಿ, ಪಾನ್ ಶಾಪ್‌ಗಳು, ಗೂಡಂಗಡಿಗಳಲ್ಲಿ ಮದ್ಯ ಮಾರಾಟ ತಪ್ಪಿಸುವುದಕ್ಕಾಗಿ ರಾಜ್ಯದೆಲ್ಲೆಡೆ ಎಂಎಸ್’ಐಎಲ್ ಕೇಂದ್ರಗಳನ್ನು ತೆರೆಯಲಾಗಿದೆ. ಸದ್ಯ 120 ಮಳಿಗೆಗಳನ್ನು ಮಂಜೂರು ಮಾಡಲಾಗಿದೆ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಗ್ರಾಮೀಣ ಭಾಗದಲ್ಲಿರುವ ಕೆಲವು ಮಳಿಗೆಗಳನ್ನು ಮುಚ್ಚಲಾಗಿದೆ. ಬಂದ್ ಸಮಯದಲ್ಲಿ ಒಂದೆರಡು ದಿನ ಮೊದಲೇ ಮದ್ಯ ಸಂಗ್ರಹಿಸಿಟ್ಟುಕೊಳ್ಳುತ್ತಿದ್ದಾರೆ. ಇದರಿಂದ ಸಂಪೂರ್ಣ ನಿಯಂತ್ರಣ ಕಷ್ಟಸಾಧ್ಯ ಎಂದರು.

ದಿನಸಿ ಅಂಗಡಿಗಳಲ್ಲಿನ ಮದ್ಯ ಮಾರಾಟ ತಪ್ಪಿಸುವುದಕ್ಕಾಗಿಯೇ ಅ.15 ಮತ್ತು 16ರಂದು ಕಲಬುರಗಿ ಮತ್ತು ಹೊಸಪೇಟೆ ವಲಯದಲ್ಲಿ ಸಭೆ ನಡೆಸಲಾಗುತ್ತಿದೆ ಎಂದ ಸಚಿವರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಕಳ್ಳಭಟ್ಟಿ ತಡೆಗೆ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ನಿಮ್ಮ ಮೇಲೆಯೇ ಕ್ರಮ ಜರುಗಿಸುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಚಿಕ್ಕನಾಯಕನಹಳ್ಳಿ ತಾಲೂಕಿನ ಹುಲಿಯಾರು ಗ್ರಾಮದಲ್ಲಿ ಸಾರ್ವಜನಿಕರ ಪ್ರತಿಭಟನೆ ನಡುವೆಯೂ ಮದ್ಯದಂಗಡಿಗೆ ಅನುಮತಿ ನೀಡಲಾಗಿದೆ. ಗ್ರಾ.ಪಂ. ಎನ್‌ಒಸಿ ಪಡೆಯದೆ ಅಧಿಕಾರಿಗಳು ಪರವಾನಗಿ ನೀಡಿದ್ದಾರೆ ಎಂದು ಸ್ಥಳೀಯರು ದೂರವಾಣಿಯಲ್ಲಿ ಮಾಹಿತಿ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವರು, ವಾರದಲ್ಲಿ ಕ್ರಮ ಜರುಗಿಸುವ ಭರವಸೆ ನೀಡಿದರು.

ನಿಯಮಕ್ಕೆ ತಿದ್ದುಪಡಿ ಪ್ರಯತ್ನ: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮದ್ಯದಂಗಡಿಗಳನ್ನು ನಡೆಸಲು ನೀಡುತ್ತಿದ್ದ ಪರವಾನಗಿ ನಿಲ್ಲಿಸಲಾಗಿದೆ. ಈ ಸಂಬಂಧ ನ್ಯಾಯಾಲಯದಲ್ಲಿಯೂ ಪ್ರಕರಣ ಇತ್ಯರ್ಥವಾಗಿದೆ. ಆದ್ದರಿಂದ ಈಗಿರುವ ನಿಯಮಗಳಿಗೆ ತಿದ್ದುಪಡಿ ತರುವ ಮೂಲಕ ಮತ್ತೊಮ್ಮೆ ಅವಕಾಶ ಮಾಡಿಕೊಡಲು ಪ್ರಯತ್ನಿಸಲಾಗುವುದು. ಕೋಟ್ಯಧೀಶರಿಗೆ ಮಾತ್ರ ಮದ್ಯದ ವ್ಯವಹಾರ ಎನ್ನುವ ಮಾತನ್ನು ಹುಸಿಗೊಳಿಸಿ ಮಧ್ಯಮ ವರ್ಗದ ಜನರಿಗೂ ಮದ್ಯದ ವ್ಯವಹಾರ ಸಾಧ್ಯವಾಗಿಸುತ್ತೇವೆ ಎಂದು ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ