
ಬೆಳಗಾವಿ: ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿರುವ ಲೈಂಗಿಕ ಶಕ್ತಿವರ್ಧಕ ಡ್ರಗ್ಸ್ ಮಾರಾಟ ಅಂಗಡಿ ಮುಂಗಟ್ಟುಗಳ ವಿರುದ್ಧ ಪಾಲಿಕೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಅಲ್ಲದೇ ಶಾಲಾ, ಕಾಲೇಜು ಸುತ್ತಮುತ್ತ ಇರುವ ಅಂಗಡಿಗಳಲ್ಲಿ ಮಾದಕ ವಸ್ತುಗಳು, ಸಿಗರೇಟ್ ಸೇರಿದಂತೆ ಇನ್ನಿತರ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವುದರ ಜತೆಗೆ ಅಂಗಡಿಯಲ್ಲಿನ ವಸ್ತುಗಳನ್ನು ಜಪ್ತಿ ಮಾಡಲು ಕ್ರಮ ಕೈಗೊಂಡಿದೆ.
ಗಡಿಭಾಗದಲ್ಲಿ ಮಾದಕ ವಸ್ತುಗಳ ಮಾರಾಟಕ್ಕೆ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಗಾಂಜಾ, ಅಫೀಮು, ಹೆರಾಯಿನ್ ಮತ್ತಿತರ ಮಾದಕ ವಸ್ತುಗಳು ಸಲೀಸಾಗಿ ವಿದ್ಯಾರ್ಥಿಗಳ ಕೈಸೇರುತ್ತಿದ್ದು, ಪೋಷಕರು ತೀವ್ರ ಆತಂಕ ಪಡುವಂತಾಗಿತ್ತು. ಅಲ್ಲದೇ ಲೈಂಗಿಕ ಶಕ್ತಿವರ್ಧಕ ಡ್ರಗ್ಸ್ ನಗರ ಹಾಗೂ ಗಡಿ ಭಾಗದಲ್ಲಿ ಎಲ್ಲೆಂದರಲ್ಲಿ ವ್ಯಾಪಕವಾಗಿ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಆ. 5 ರಂದು ಕನ್ನಡಪ್ರಭ ‘ಬೆಳಗಾವಿಯಲ್ಲಿ ಲೈಂಗಿಕ ಶಕ್ತಿವರ್ಧಕ ಡ್ರಗ್ಸ್’ ಮಾರಾಟದ ಬಗ್ಗೆ ವಿಸ್ತೃತ ವರದಿ ಪ್ರಕಟಿಸಿ ನಿದ್ರೆಗೆ ಜಾರಿದ್ದ ಅಧಿಕಾರಿಗಳನ್ನು ಬಡಿದೆಬ್ಬಿಸುವ ಕೆಲಸ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.