
ಬೆಂಗಳೂರು,[ಅ.30]: ನಟಿ ಶ್ರುತಿ ಹರಿಹರನ್ #MeToo ಆರೋಪ ವಿಚಾರವಾಗಿ ಎಫ್ಐಆರ್ ರದ್ದು ಕೋರಿ ಅರ್ಜುನ್ ಸರ್ಜಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ತಮ್ಮ ವಿರುದ್ಧ ತಡವಾಗಿ ಸುಳ್ಳು ದೂರು ಸಲ್ಲಿಕೆಯಾಗಿದೆ. ಇದು ಸತ್ಯಕ್ಕೆ ದೂರವಾದ ಆರೋಪ. ಈ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಕೇವಲ ಪ್ರಚಾರಕ್ಕಾಗಿ ನಮ್ಮ ಮೇಲೆ ಆರೋಪ ಮಾಡಲಾಗಿದೆ ಎಂದು ಎಫ್ಐಆರ್ ರದ್ದು ಹಾಗೂ ತನಿಖೆಗೆ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ಹೊಸ ತಿರುವು ಪಡೆದುಕೊಂಡ ಅರ್ಜುನ್ ಸರ್ಜಾ-ಶೃತಿ ಹರಿಹರನ್ MeToo ರಂಪಾಟ
ಅರ್ಜಿ ಇತ್ಯರ್ಥ ಆಗುವವರೆಗೂ ತನಿಖೆ ತಾತ್ಕಾಲಿಕ ತಡೆಯಾಜ್ಞೆ ನೀಡಿ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಆರ್ಪಿಸಿ ಸೆಕ್ಷನ್ 482ರ ಅಡಿ ಎಫ್ಐಆರ್ ರದ್ದು ಮಾಡುವಂತೆ ಅರ್ಜುನ್ ಪರ ವಕೀಲ ಬಿ.ವಿ.ಆಚಾರ್ಯ ವಾದ ಮಂಡಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.