
ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಷ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿದೆ. ಆದರೆ, ಮಂಡ್ಯ ದಿಂದ ಒಂದು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಕಾಂಗ್ರೆಸ್‌ನ ಸಾಮಾ ಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಅವರು ಅಂಬರೀಷ್ ಅಂತಿಮ ದರ್ಶನಕ್ಕೆ ಆಗಮಿಸದಿರುವುದಕ್ಕೆ ಬಿಜೆಪಿ ಮುಖಂಡ ಹಾಗೂ ನಟ ಜಗ್ಗೇಶ್ ಟ್ವೀಟರ್ ಮೂಲಕ ರಮ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್‌ನಿಂದ ಮಂಡ್ಯಲೋಕಸಭೆಗೆ ಆಯ್ಕೆಯಾಗುವ ಮೂಲಕ ರಾಜ ಕೀಯ ಜೀವನ ಆರಂಭಿಸಿದ ನಟಿ ರಮ್ಯಾ, ಮಂಡ್ಯದ ಗಂಡು ಅಂಬರೀಷ್ ಅವರ ಅಂತಿಮ ದರ್ಶನಕ್ಕೆ ಆಗಮಿಸದಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಇದರ ಬೆನ್ನಲೇ ನಟ ಜಗ್ಗೇಶ್ ಟ್ವೀಟ್ ಮಾಡುವ ಮೂಲಕ ಪರೋಕ್ಷವಾಗಿ ರಮ್ಯಾ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಾವನ್ನು ಗೌರವಿಸದ ಮನುಷ್ಯ ರೂಪದ ರಾಕ್ಷಣ ಗುಣಹೊಂದಿದವರು, ಅಂತಿಮ ದರ್ಶನಕ್ಕೂ ಆಗಮಿಸದೇ ಕ್ರೂರತ್ವದ ಮತ್ತೊಂದು ಮುಖವನ್ನು ಪ್ರದರ್ಶನ ಮಾಡಿದ್ದಾರೆ. ನಾವು ಮಾಡುವ ಪ್ರತಿಯೊಂದನ್ನು ಆ ದೇವರು ನೋಡುತ್ತಿರುತ್ತಾನೆ. ಒಂದಲ್ಲ ಒಂದು ದಿನ ಇದಕ್ಕೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಅರ್ಥದಲ್ಲಿ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.