
ಮೈಸೂರು: ಬಹುಭಾಷಾ ನಟ ಪ್ರಕಾಶ್ ರೈ ಅವರು ಸಂಸದ ಪ್ರತಾಪ್‌ಸಿಂಹ ಅವರ ವಿರುದ್ಧ ಇಂದು ಮೈಸೂರು ನ್ಯಾಯಾಲಯದಲ್ಲಿ 1ರು.ರಷ್ಟು ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾರೆ.
ನಟ ಪ್ರಕಾಶ್ ಆರಂಭಿಸಿರುವ ‘ಜಸ್ಟ್ ಆಸ್ಕಿಂಗ್’ ಚಳವಳಿಯ ಭಾಗವಾಗಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಎತ್ತಿದ್ದ ಪ್ರಶ್ನೆಗಳಿಗೆ ಸಂಸದ ಪ್ರತಾಪಸಿಂಹ ತಮ್ಮ ಅಂಕಣ ಬರಹ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ರೈ ಒತ್ತಾಯಿಸಿದ್ದರು.
ಇದುವರೆಗೆ ಸಂಸದ ಪ್ರತಾಪಸಿಂಹ ಕ್ಷಮೆ ಕೋರದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕಾಶ್ ರೈ ಅವರು ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾರೆಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.