ದರ್ಶನ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಿವಣ್ಣ

Published : Sep 25, 2018, 09:09 PM IST
ದರ್ಶನ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಿವಣ್ಣ

ಸಾರಾಂಶ

ಕಾರ್ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಕೋಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಮೈಸೂರು, [ಸೆ.25]: ಕಾರ್ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಕೋಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ದರ್ಶನ್ ಭೇಟಿ ನಂತರ ಪ್ರತಿಕ್ರಿಯಿಸಿದ ನಟ ಶಿವರಾಜ್ ಕುಮಾರ್,  ದರ್ಶನ್ ಆರೋಗ್ಯವಾಗಿದ್ದಾರೆ. ಕೈಗೆ ಬಾಂಡೆಜ್ ಹಾಕಿರುವುದರಿಂದ ಕೆಳಗೆ ಬಂದು ಮಾತಾಡಲು ಆಗಿಲ್ಲ‌. ಇನ್ನೆರಡು ದಿನದಲ್ಲಿ ದರ್ಶನ್ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದರು.

ತಾಯಿ ಚಾಮುಂಡೇಶ್ವರಿ ಇರುವ ಜಾಗದಲ್ಲಿ ದರ್ಶನ್ ಗೆ ಏನ್ ಆಗುತ್ತೆ ಹೇಳಿ. ದೇವರಾಜ್ ಮತ್ತು ಪ್ರಜ್ವಲ್‌ರನ್ನ ಫೋನ್ ಮುಖಾಂತರ ಮಾತಾಡುತ್ತೇನೆ. ಅಭಿಮಾನಿಗಳು ಯಾರು ಆತಂಕಪಡುವ ಅವಶ್ಯಕತೆ ಇಲ್ಲ. ಅವರು ಕ್ಷೇಮವಾಗಿದ್ದಾರೆ, ದೇವರು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ