ಮಾಸ್ತಿಗುಡಿ ಶೂಟಿಂಗ್ ದುರಂತಕ್ಕೆ ನಟ ಯಶ್ ಪ್ರತಿಕ್ರಿಯೆ

Published : Nov 07, 2016, 01:34 PM ISTUpdated : Apr 11, 2018, 01:01 PM IST
ಮಾಸ್ತಿಗುಡಿ ಶೂಟಿಂಗ್ ದುರಂತಕ್ಕೆ ನಟ ಯಶ್ ಪ್ರತಿಕ್ರಿಯೆ

ಸಾರಾಂಶ

"ಈಜು ಬರದಿದ್ದವರನ್ನು ಬಿಡಿ, ಈಜು ಬರುವವರೂ ಕೂಡ ಇಂಥ ಸ್ಟಂಟ್'ಗಳನ್ನು ಮಾಡಲು ಹೆದರುತ್ತಾರೆ. ಈ ಘಟನೆಯಲ್ಲಿ ಪಕ್ಕಾ ಬೇಜವಾಬ್ದಾರಿತನ ಎದ್ದುಕಾಣುತ್ತದೆ" ಎಂದು ಯಶ್ ಹೇಳಿದ್ದಾರೆ.

ಬೆಂಗಳೂರು(ನ. 07): ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಶೂಟಿಂಗ್ ವೇಳೆ ಸಂಭವಿಸಿದ ಇಬ್ಬರು ನಟರ ಸಾವಿಗೆ ನಾಯಕನಟ ಯಶ್ ಸಂತಾಪ ಸೂಚಿಸಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಯಶ್, ಸ್ಟಂಟ್ ಮಾಡುವ ಮುನ್ನ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. "ಈಜು ಬರದಿದ್ದವರನ್ನು ಬಿಡಿ, ಈಜು ಬರುವವರೂ ಕೂಡ ಇಂಥ ಸ್ಟಂಟ್'ಗಳನ್ನು ಮಾಡಲು ಹೆದರುತ್ತಾರೆ. ಸೇಫ್ಟಿ ಮೆಷರ್ಸ್ ಇದ್ದರೂ ಏಟು ಬೀಳುವ ಸಾಧ್ಯತೆ ಇರುತ್ತದೆ. ಈ ಘಟನೆಯಲ್ಲಿ ಪಕ್ಕಾ ಬೇಜವಾಬ್ದಾರಿತನ ಎದ್ದುಕಾಣುತ್ತದೆ" ಎಂದು ಯಶ್ ಹೇಳಿದ್ದಾರೆ.

ಇಬ್ಬರು ನಟರು ಯಾವುದೇ ಸುರಕ್ಷತಾ ಕ್ರಮ ತೆಗೆದುಕೊಳ್ಳದೇ ಇಂಥ ಸ್ಟಂಟ್ ಮಾಡಿದ್ದು ತಪ್ಪು ಎಂಬುದು ಯಶ್ ಅಭಿಪ್ರಾಯ. ಆದರೆ, ಯಾರನ್ನೂ ಹೊಣೆ ಮಾಡುವ ಸಂದರ್ಭ ಇದಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಗಂಭೀರವಾಗಿ ಯೋಚಿಸಿ ತಪ್ಪು ತಿದ್ದಿಕೊಳ್ಳುವಂತಾಗಬೇಕು ಎಂದು ಯಶ್ ಸಲಹೆ ನೀಡಿದ್ದಾರೆ.

"ರಾಘವ್ ಉದಯ್ ಮತ್ತು ಅನಿಲ್ ಇಬ್ಬರೂ ಬಹಳ ಹಾರ್ಡ್'ವರ್ಕಿಂಗ್ ವ್ಯಕ್ತಿಗಳು. ಅವರಿಬ್ಬರು ಎಷ್ಟು ಕಷ್ಟಪಟ್ಟಿದ್ದಾರೆಂದು ನನಗೆ ಚೆನ್ನಾಗಿ ಗೊತ್ತು. ಮೊನ್ನೆ ತಾನೆ ಒಟ್ಟಿಗೆ ಕೂತು ಊಟ ಮಾಡಿದ್ದೆವು" ಎಂದು ಇದೇ ವೇಳೆ ಯಶ್ ಮೃತರನ್ನು ಸ್ಮರಿಸಿಕೊಂಡರು.

ಇಂದು ತಿಪ್ಪಗೊಂಡನಹಳ್ಳಿ ಜಲಾಶಯದ ಬಳಿ ಮಾಸ್ತಿಗುಡಿ ಸಿನಿಮಾದ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ. ದುನಿಯಾ ವಿಜಿ, ಉದಯ್ ಮತ್ತು ಅನಿಲ್ ಮೂವರೂ ಕೂಡ ಹೆಲಿಕಾಪ್ಟರ್'ನಿಂದ ಜಲಾಶಯಕ್ಕೆ ಧುಮುಕುತ್ತಾರೆ. ಇವರಲ್ಲಿ ದುನಿಯಾ ವಿಜಿ ಬದುಕುಳಿಯುತ್ತಾರೆ. ಇನ್ನಿಬ್ಬರು ನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಿ: ಸಿಎಂಗೆ ಮಹಿಳಾ ಆಯೋಗ ಮನವಿ
ಬಿಪಿಎಲ್ ಕಾರ್ಡ್‌ನ 2.95 ಲಕ್ಷ ಅರ್ಜಿ ವಿಲೇವಾರಿ: ಮುನಿಯಪ್ಪ