
ತಿರುವನಂತಪುರಂ : ಸ್ಯಾಂಡಲ್ ವುಡ್, ಬಾಲಿವುಡ್, ಕಾಲಿವುಡ್ ಸೇರಿದಂತೆ ವಿವಿಧ ಇಂಡಸ್ಟ್ರಿಗಳಲ್ಲಿ ಸೌಂಡ್ ಮಾಡಿದ್ದ ಮೀ ಟೂ ಬಗ್ಗೆ ಇದೀಗ ಮಿಲನ ಚೆಲುವೆ ಪಾರ್ವತಿ ಮೆನನ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಎಲ್ಲಾ ಇಂಡಸ್ಟ್ರಿಗಳಲ್ಲಿ ಮೀ ಟೂ ಬಗ್ಗೆ ಸದ್ದಾಗುತ್ತಿದೆ. ಬಾಲಿವುಡ್ ಅಂಗಳದಲ್ಲಿ ದೊಡ್ಡ ನಟರ ಬಗ್ಗೆಯೂ ಅಭಿಪ್ರಾಯ ತಿಳಿಸುತ್ತಿದ್ದಾರೆ. ಅದರಂತೆಯೇ ಮಲಯಾಳಂ ಸಿನಿಮಾ ರಂಗದಲ್ಲಿಯೂ ಈ ಬಗ್ಗೆ ಬಗ್ಗೆ ಮನಬಿಚ್ಚಿ ಮಾತನಾಡುವಂತೆ ಆಗಬೇಕು ಎಂದು ಹೆಳಿದ್ದಾರೆ.
ಯಾರು ಮುಂಚೂಣಿಯಲ್ಲಿದ್ದಾರೋ ಅಂತವರ ಬಗ್ಗೆಯೂ ಸಾಕಷ್ಟು ಆರೋಪಗಳು ಕೇಳಿ ಬರುತ್ತಿದ್ದು ಇವೆಲ್ಲವೂ ಕೂಡ ಆಶ್ಚರ್ಯ ಉಂಟು ಮಾಡುತ್ತಿದೆ.
ಈ ಧ್ವನಿ ಎತ್ತುತ್ತಿದ್ದು, ಮಲಯಾಳಂ ಚಿತ್ರರಂಗದಲ್ಲಿಯೂ ಕೂಡ ಇಂತಹ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದೊಂದು ಬೇರೆಯವರಿಗೆ ಎಚ್ಚರಿಕೆಯ ಸಂದೇಶವಾಗಿಯೂ ಪರಣಮಿಸಬೇಕು ಎಂದು ಮಾಮಿ ಫಿಲ್ಮ್ ಫೆಸ್ಟಿವಲ್ ನಲ್ಲಿ ಪಾರ್ವತಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಈ ರೀತಿಯಾಗಿ ದೊಡ್ಡವರ ಬಗ್ಗೆ ನಟಿಯರು ಮಾತನಾಡುತ್ತಿರುವುದು ಸ್ವಾಗತಾರ್ಹ ಎಂದು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಬಾಲಿವುಡ್ ನಲ್ಲಿ ಅನೇಕ ಪ್ರಮುಖ ನಿರ್ದೇಶಕರು, ನಟರು, ನಿರ್ಮಾಪಕರ ವಿರುದ್ಧ ಮೀ ಟೂ ಆರೋಪ ಕೇಳಿ ಬಂದಿದ್ದು, ಇಂತಹ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಈ ವೇಳೆ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.