ಅಕ್ರಮ ಸಂಬಂಧ ಅಪರಾಧವಲ್ಲ: ಸುಪ್ರೀಂ ತೀರ್ಪು!

Published : Sep 27, 2018, 11:48 AM ISTUpdated : Sep 27, 2018, 05:14 PM IST
ಅಕ್ರಮ ಸಂಬಂಧ ಅಪರಾಧವಲ್ಲ: ಸುಪ್ರೀಂ ತೀರ್ಪು!

ಸಾರಾಂಶ

ವ್ಯಭಿಚಾರ ಕ್ರಿಮಿನಲ್ ಅಪರಾಧವಲ್ಲ ಎಂದ ಸುಪ್ರೀಂ! ಗಂಡ ಹೆಂಡತಿಗೆ ಮಾಲೀಕನಲ್ಲ ಎಂದ ಸುಪ್ರೀಂ! ಸುಪ್ರೀಂ ಕೋರ್ಟ್ ನಿಂದ ಐತಿಹಾಸಿಕ ತೀರ್ಪು! ಮಹಿಳೆ-ಪುರುಷರು ಇಬ್ಬರು ಸಮಾನರು ಎಂದ ಸುಪ್ರೀಂ

ನವದೆಹಲಿ(ಸೆ.27): ಮಹತ್ವದ ಬೆಳವಣಿಗೆಯೊಂದರಲ್ಲಿ ವ್ಯಭಿಚಾರ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಕುರಿತಾದ ಐಪಿಸಿ ಕಾನೂನನ್ನು ಅಸಂವಿಧಾನಿಕ ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ.

ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ ಎಂದು ಹೇಳಿರುವ ಸರ್ವೋಚ್ಛ ನ್ಯಾಯಾಲಯ, ಪತ್ನಿಗೆ ಪತಿಯೇ ಮಾಲಿಕನಲ್ಲ, ಮಹಿಳೆ-ಪುರುಷರು ಇಬ್ಬರು ಸಮಾನರು ಎಂದು ಹೇಳುವ ಮೂಲಕ ಐತಿಹಾಸಿಕ ತೀರ್ಪು ನೀಡಿದೆ.

"

ಸೆಕ್ಷನ್ 497ರ ಅಸಾಂವಿಧಾನಿಕ  ತೀರ್ಪು ಎಂದು ಸುಪ್ರೀಂಕೋರ್ಟ್ ಹೇಳಿದೆ,  ಅನೈತಿಕ ಸಂಬಂಧದ ಕುರಿತು ತೀರ್ಪು ಓದಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಕಾನೂನಿನ ಪ್ರಕಾರ ಗಂಡನೇ ಎಲ್ಲದಕ್ಕೂ ಮುಖ್ಯಸ್ಥನಲ್ಲ, ಮಹಿಳೆಗೂ ಗೌರವ ತೋರಬೇಕು ಎಂದು ಹೇಳಿದ್ದಾರೆ.

ಮಹಿಳೆಯರ ಜೊತೆ ಅಗೌರವದ ವರ್ತನೆ ಸರಿಯಲ್ಲ, ಮಹಿಳೆಯರಿಗೆ ಅಗೌರವ ತೋರುವ ಕಾನೂನು ಸಾಂವಿಧಾನಿಕವಲ್ಲ ಎಂದು ದೀಪಕ್ ಮಿಶ್ರ ಅವರನ್ನೊಳಗೊಂಡ ನಾಲ್ವರು ನ್ಯಾಯಾಧೀಶರ ಪೀಠ ಅಭಿಪ್ರಾಯಪಟ್ಟಿದೆ. 

ಒಂದು ವೇಳೆ ಅನೈತಿಕ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದರೆ ಅದನ್ನು ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದೂ ಸುಪ್ರೀಂ ಸ್ಪಷ್ಟಪಡಿಸಿದೆ.

"Woman after marriage does not pledge her sexual autonomy to her husband and depriving her of choice to have consensual sex with anyone outside marriage cannot be curbed." - ಜಸ್ಟೀಸ್ ಚಂದ್ರಚೂಡ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!