
ಪಣಜಿ[ಜ.02]: ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್, ಕಳೆದ ನಾಲ್ಕು ತಿಂಗಳಿನಲ್ಲಿಯೇ ಮೊದಲ ಬಾರಿಗೆ ವಿಧಾನಸೌಧದಲ್ಲಿರುವ ತಮ್ಮ ಕಚೇರಿಗೆ ಅಚ್ಚರಿ ರೀತಿಯಲ್ಲಿ ಹೊಸ ವರ್ಷದ ಮೊದಲ ದಿನವಾದ ಮಂಗಳವಾರ ಹಾಜರಾಗಿದ್ದಾರೆ.
ಬೆಳಗ್ಗೆ 10.45ಕ್ಕೆ ಕಚೇರಿಗೆ ಆಗಮಿಸಿ ಪರ್ರಿಕರ್ ಅವರನ್ನು ಬಿಜೆಪಿ ಶಾಸಕರು ಹಾಗೂ ಸಚಿವರು ಬರಮಾಡಿಕೊಂಡರು. ಈ ವೇಳೆ ಸಾವಿರಾರು ಕಾರ್ಯಕರ್ತರು ನೆರೆದಿದ್ದರು. ಸಿಬ್ಬಂದಿ ಇಲಾಖೆಯ ಅಧಿಕಾರಿಗಳ ಜೊತೆ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳು ಹಾಗೂ ಇತರ ವಿಷಯಗಳ ಬಗ್ಗೆ ಪರ್ರಿಕರ್ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
2018ರ ಅಗಸ್ಟ್‌ನಲ್ಲಿ ಕೊನೆಯ ಬಾರಿ ಅವರು ಕಚೇರಿಗೆ ಹಾಜರಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ