ಕೇರಳ ಪ್ರವಾಹ: ಮೋದಿ ವೈಮಾನಿಕ ಸಮೀಕ್ಷೆ ಆರಂಭ

By Web DeskFirst Published Aug 18, 2018, 10:54 AM IST
Highlights

ಕೇರಳದಲ್ಲಿ ಹಾನಿಗೊಳಗಾದ ಪ್ರದೇಶಗಳ ಪೈಕಿ ಎರ್ನಾಕುಲಂ, ತ್ರಿಶೂರ್ ಜಿಲ್ಲೆಗಳ ಕೆಲ ಭಾಗಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಹವಾಮಾನ ವೈಪರಿತ್ಯದಿಂದ ವೈಮಾನಿಕ ಸಮೀಕ್ಷೆ ನಡೆಸುವುದು ಸಾಧ್ಯವಿಲ್ಲ ಎನ್ನಲಾಗಿತ್ತು. ಆದರೆ ಉನ್ನತ ಮಟ್ಟದ ಸಭೆ ಬಳಿಕ ವೈಮಾನಿಕ ಸಮೀಕ್ಷೆ ನಡೆಸಲು ಪ್ರಧಾನಿ ಹಾಗೂ ಮುಖ್ಯಮಂತ್ರಿ ಮುಂದಾಗಿದ್ದಾರೆ. ರಕ್ಷಣ ಪಡೆಗಳು ಹಗಲಿರುಳೆನ್ನದೇ ಕಾರ್ಯಾಚರಣೆ ನಡೆಸಿ ಇದುವರೆಗೆ ಸುಮಾರು 82 ಸಾವಿರ ಜನರನ್ನು ರಕ್ಷಿಸಿದ್ದಾರೆ.

ತಿರುವನಂತಪುರಂ(ಆ.18): ಕೇರಳದಲ್ಲಿ ಕಳೆದ ಒಂಬತ್ತು ದಿನಗಳಿಂದ ಎಡಬಿಡದೇ ಸುರಿಯುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸಿದ ಬಳಿಕ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ.

ಕೇರಳದಲ್ಲಿ ಹಾನಿಗೊಳಗಾದ ಪ್ರದೇಶಗಳ ಪೈಕಿ ಎರ್ನಾಕುಲಂ, ತ್ರಿಶೂರ್ ಜಿಲ್ಲೆಗಳ ಕೆಲ ಭಾಗಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಹವಾಮಾನ ವೈಪರಿತ್ಯದಿಂದ ವೈಮಾನಿಕ ಸಮೀಕ್ಷೆ ನಡೆಸುವುದು ಸಾಧ್ಯವಿಲ್ಲ ಎನ್ನಲಾಗಿತ್ತು. ಆದರೆ ಉನ್ನತ ಮಟ್ಟದ ಸಭೆ ಬಳಿಕ ವೈಮಾನಿಕ ಸಮೀಕ್ಷೆ ನಡೆಸಲು ಪ್ರಧಾನಿ ಹಾಗೂ ಮುಖ್ಯಮಂತ್ರಿ ಮುಂದಾಗಿದ್ದಾರೆ.

ರಕ್ಷಣ ಪಡೆಗಳು ಹಗಲಿರುಳೆನ್ನದೇ ಕಾರ್ಯಾಚರಣೆ ನಡೆಸಿ ಇದುವರೆಗೆ ಸುಮಾರು 82 ಸಾವಿರ ಜನರನ್ನು ರಕ್ಷಿಸಿದ್ದಾರೆ. ಕೇರಳದಲ್ಲಿ 1924ರಲ್ಲೂ ಇದೇ ರೀತಿಯ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಕೇರಳದ 14 ಜಿಲ್ಲೆಗಳ ಜನ ವಸತಿ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ.  
 
     
    

click me!