
ಬೆಂಗಳೂರು[ಫೆ.24] ಮುಂದಿನ ಸಾರಿಯೂ ಬೆಂಗಳೂರಿನಲ್ಲೇ ಏರ್ ಶೋ ನಡೆಸಲು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಏರೋ ಇಂಡಿಯಾ ಕುರಿತು ಉನ್ನತ ಮಟ್ಟದ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಏರೋ ಇಂಡಿಯಾ ವೈಮಾನಿಕ ಪ್ರದರ್ಶನದದ ವಿಚಾರಗಳ ಕುರಿತು ಪರಾಮರ್ಶೆ ನಡೆಸಲು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಎಂ. ಬಿ. ಪಾಟೀಲ್ ಭಾಗಿಯಾಗಿದ್ದರು.
ಏರೀ ಇಂಡಿಯಾ ದುರಂತದಕ್ಕೆ ಕಾರಣವಾದ ಬೆಂಕಿ
ಬೆಂಗಳೂರಿನಿಂದ ಈ ಕಾರ್ಯಕ್ರಮ ಸ್ಥಳಾಂತರವಾಗುವ ಕುರಿತ ಮಾತು ಈ ಹಿಂದೆ ಕೇಳಿಬಂದಿತ್ತು. ಏರ್ ಶೋ ಸಂದರ್ಭದಲ್ಲಿ ನಡೆದ ಎರಡು ಅಹಿತಕರ ಘಟನೆಗಳ ಬಗ್ಗೆ ಸಭೆಯಲ್ಲಿ ವಿಷಾದ ವ್ಯಕ್ತವಾಯಿತು. ವಾಹನ ಕಳೆದುಕೊಂಡವರಿಗೆ ಎಲ್ಲ ನೆರವು ನೀಡುವ ಭರವಸೆ ನೀಡಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.