
ಬೆಂಗಳೂರು: ಯಲಹಂಕದಲ್ಲಿ ನಡೆದ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 300 ವಾಹನಗಳು ಸುಟ್ಟು ಕರಕಲಾಗಿರುವ ಹಿನ್ನೆಲೆಯಲ್ಲಿ ವಾಹನ ಮಾಲೀಕರು ವಾಹನದ ನೋಂದಣಿ ಹಾಗೂ ಚಾಲನಾ ಪರವಾನಗಿ ಪಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಸಾರಿಗೆ ಇಲಾಖೆ ಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಸಹಾಯ ಕೇಂದ್ರ ತೆರೆದಿದೆ.
ಅಗ್ನಿ ಅವಘಡದಲ್ಲಿ ಹಾನಿಗೊಳಗಾಗಿರುವ ವಾಹನ ಮಾಲೀಕರು ಈ ಸಹಾಯ ಕೇಂದ್ರಕ್ಕೆ ಭೇಟಿ ನೀಡಿ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆಯಬಹುದು.
ಹೊರರಾಜ್ಯದ ನೋಂದಣಿ ವಾಹನಗಳು ಹಾನಿಗೊಳಗಾಗಿದ್ದರೂ ಮಾಲೀಕರು ಈ ಸಹಾಯ ಕೇಂದ್ರದಲ್ಲಿ ಮಾಹಿತಿ ಪಡೆಯಬಹುದು. ಸಹಾಯ ಕೇಂದ್ರದ ದೂರವಾಣಿ ಸಂಖ್ಯೆ 080 29729908, 29729909, ಮೊಬೈಲ್ ಸಂಖ್ಯೆ 9449864050 ಎಂದು ಸಾರಿಗೆ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ