
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಸತತ ಎರಡನೇ ಬಾರಿಗೆ ಆಯ್ಕೆಯಾಗಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಾಜ್ಯಸಭೆಯಲ್ಲಿ ಮ್ಯಾಜಿಕ್ ನಂಬರ್ ತಲುಪಲು ಒಂದೂವರೆ ವರ್ಷ ಕಾಯಬೇಕಾಗಿದೆ. 2020 ರ ನವೆಂಬರ್‌ವರೆಗೆ 75 ರಾಜ್ಯಸಭಾ ಸದಸ್ಯರು ನಿವೃತ್ತರಾಗಲಿದ್ದಾರೆ.
ಆ ಪೈಕಿ 20 ಸ್ಥಾನಗಳನ್ನು ಗಳಿಸಲು ಸರ್ಕಾರಕ್ಕೆ ಅವಕಾಶವಿದೆ. 245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಬಹುಮತಕ್ಕೆ 123 ಸ್ಥಾನಗಳು ಬೇಕು. ಸದ್ಯ ಎನ್‌ಡಿಎ 101 ಸದಸ್ಯರನ್ನು ಹೊಂದಿದೆ. ನಾಮನಿರ್ದೇಶಿತ ಸದಸ್ಯರಾದ ಸ್ವಪನ್ ದಾಸ್ ಗುಪ್ತಾ, ಮೇರಿ ಕೋಮ್ ಹಾಗೂ ನರೇಂದ್ರ ಜಾಧವ್ ಮತ್ತು ಮೂವರು ಪಕ್ಷೇತರ ಸದಸ್ಯರ ಬೆಂಬಲ ಗಣನೆಗೆ ತೆಗೆದುಕೊಂಡರೆ ಈ ಸಂಖ್ಯೆ 107 ಕ್ಕೇರುತ್ತದೆ.
ಈ ನಡುವೆ, ಯುಪಿಎ ಸರ್ಕಾರದಿಂದ ನಾಮನಿರ್ದೇಶಿತ ಗೊಂಡಿದ್ದ ಕೆ.ಟಿ.ಎಸ್. ತುಳಸಿ ಅವರು ಮುಂದಿನ ವರ್ಷ ನಿವೃತ್ತರಾಗುತ್ತಿದ್ದಾರೆ. ಆ ಸ್ಥಾನ ತುಂಬಲು ಸರ್ಕಾರಕ್ಕೆ ಅವಕಾಶ ವಿದೆ. ಮಿಕ್ಕಂತೆ ಉತ್ತರಪ್ರದೇಶ, ಬಿಹಾರ, ತಮಿಳುನಾಡು, ಗುಜರಾತ್, ಮಧ್ಯಪ್ರದೇಶ ಹಾಗೂ ಕರ್ನಾಟಕ ಸೇರಿದಂತೆ 14 ರಾಜ್ಯಗಳಿಂದ 19 ಸೀಟುಗಳನ್ನು ಎನ್‌ಡಿಎ ಸುಲಭವಾಗಿ ಪಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.