
ನವದೆಹಲಿ[ಜ.17]: ಕರ್ನಾಟಕದ ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ‘ಆಪರೇಷನ್ ಕಮಲ’ ಆರಂಭಿಸಿದೆ ಎನ್ನಲಾಗುತ್ತಿರುವ ಬಿಜೆಪಿ, ಕಳೆದ ತಿಂಗಳಷ್ಟೇ ಅಧಿಕಾರಕ್ಕೇರಿದ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಅದೇ ತಂತ್ರಗಾರಿಕೆಯನ್ನು ಮಾಡುತ್ತಿದೆಯೇ?
ಹೌದು ಎನ್ನುತ್ತಿದ್ದಾರೆ ಆ ರಾಜ್ಯದ ಸಚಿವರೊಬ್ಬರು. ಮೂರು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡ ಬಳಿಕ ಆಕ್ರೋಶಗೊಂಡಿರುವ ಬಿಜೆಪಿ, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶದಲ್ಲಿ ಕುದುರೆ ವ್ಯಾಪಾರ ಮಾಡಲು ಪ್ರಯತ್ನಿಸುತ್ತಿದೆ ಎಂದು ಕಾನೂನು ಸಚಿವ ಪಿ.ಸಿ. ಶರ್ಮಾ ಆರೋಪಿಸಿದ್ದಾರೆ.
230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಹುಮತಕ್ಕೆ 116 ಸ್ಥಾನಗಳು ಬೇಕು. ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ 114 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್, ಕೇವಲ 2 ಸ್ಥಾನಗಳಿಂದ ಬಹುಮತದಿಂದ ವಂಚಿತವಾಗಿತ್ತು. 109 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದ ಬಿಜೆಪಿ, ಕೇವಲ 7 ಸ್ಥಾನಗಳಿಂದ ಮ್ಯಾಜಿಕ್ ಸಂಖ್ಯೆಯಿಂದ ದೂರ ಉಳಿದಿತ್ತು. ಕಮಲ್‌ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಬಿಎಸ್ಪಿಯ ಇಬ್ಬರು, ಎಸ್ಪಿಯ ಓರ್ವ ಹಾಗೂ ನಾಲ್ವರು ಪಕ್ಷೇತರರ ಬೆಂಬಲವಿದೆ. ಇಷ್ಟೂಮಂದಿ ಬಿಜೆಪಿ ಬೆಂಬಲಕ್ಕೆ ನಿಂತರೆ ಕಾಂಗ್ರೆಸ್‌ಗೆ ಅಧಿಕಾರ ಕಳೆದುಕೊಳ್ಳುವ ಅಪಾಯ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ