ರಮ್ಯಾ ಮತ್ತೆ ಚಿತ್ರರಂಗಕ್ಕೆ!

Published : Jun 09, 2018, 08:31 AM ISTUpdated : Jun 09, 2018, 11:24 AM IST
ರಮ್ಯಾ ಮತ್ತೆ ಚಿತ್ರರಂಗಕ್ಕೆ!

ಸಾರಾಂಶ

ಮಾಜಿ ಸಂಸದೆ ರಮ್ಯಾ ಮತ್ತೆ ಕನ್ನಡ ಚಿತ್ರರಂಗಕ್ಕೆ ವಾಪಸು ಬರುವ ಮನಸ್ಸು ಮಾಡಿದ್ದಾರೆ. ಲೋಕಸಭೆ ಚುನಾವಣೆ ನಂತರ ಅವರು ಚಿತ್ರರಂಗಕ್ಕೆ ರೀ ಎಂಟ್ರಿ ಆಗುವ ಸಾಧ್ಯತೆ ಇದೆ. ಖುದ್ದು ರಮ್ಯಾ ಅವರೇ ಈ ಸಾಧ್ಯತೆಯ ಕುರಿತು ಮಾತನಾಡಿದ್ದಾರೆ.

ಬೆಂಗಳೂರು :  ಮಾಜಿ ಸಂಸದೆ ರಮ್ಯಾ ಮತ್ತೆ ಕನ್ನಡ ಚಿತ್ರರಂಗಕ್ಕೆ ವಾಪಸು ಬರುವ ಮನಸ್ಸು ಮಾಡಿದ್ದಾರೆ. ಲೋಕಸಭೆ ಚುನಾವಣೆ ನಂತರ ಅವರು ಚಿತ್ರರಂಗಕ್ಕೆ ರೀ ಎಂಟ್ರಿ ಆಗುವ ಸಾಧ್ಯತೆ ಇದೆ. ಖುದ್ದು ರಮ್ಯಾ ಅವರೇ ಈ ಸಾಧ್ಯತೆಯ ಕುರಿತು ಮಾತನಾಡಿದ್ದಾರೆ.

ರಮ್ಯಾ ಅವರು ಈ ವಿಚಾರ ಸ್ಪಷ್ಟಪಡಿಸಿದ್ದು ಟ್ವೀಟರ್‌ನಲ್ಲಿ. ನಟ ರಕ್ಷಿತ್‌ ಶೆಟ್ಟಿಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಟ್ರೇಲರ್‌ ಅನ್ನು ರಮ್ಯಾ ಮೆಚ್ಚಿ ಟ್ವೀಟ್‌ ಮಾಡಿದ್ದರು. ಆ ಟ್ವೀಟ್‌ಗೆ ಧನ್ಯವಾದ ಸಲ್ಲಿಸುವ ಸಂದರ್ಭದಲ್ಲಿ ರಕ್ಷಿತ್‌ ಶೆಟ್ಟಿ, ‘ನೀವು ಯಾವತ್ತೂ ಸ್ಯಾಂಡಲ್‌ವುಡ್‌ ಕ್ವೀನ್‌, ನಿಮ್ಮನ್ನು ಮತ್ತೆ ಬೆಳ್ಳಿ ತೆರೆಯಲ್ಲಿ ನೋಡಲು ಇಚ್ಛಿಸುತ್ತೇನೆ’ ಎಂದಿದ್ದರು.

ಅಚ್ಚರಿ ಎಂಬಂತೆ ಅದಕ್ಕೆ ಪ್ರತಿಕ್ರಿಯಿಸಿದ ರಮ್ಯಾ, ‘2019ರ ನಂತರ’ ಎಂದಿದ್ದಾರೆ. ಈ ಇಬ್ಬರ ಟ್ವೀಟ್‌ಗಳನ್ನು ಗಮನಿಸಿದ ಟ್ವೀಟರ್‌ ಜಗತ್ತು ಚಿತ್ರರಂಗಕ್ಕೆ ರಮ್ಯಾ ಪುನರಾಗಮನ ಕುರಿತು ಚರ್ಚೆಯಲ್ಲಿ ತೊಡಗಿದೆ. ಕನ್ನಡ ಚಿತ್ರರಂಗ ಮತ್ತು ರಾಜಕಾರಣ ಎರಡೂ ಕ್ಷೇತ್ರದಲ್ಲಿ ಈ ಸಂಗತಿ ಭಾರಿ ಚರ್ಚೆಯಾಗುವುದು ನಿಶ್ಚಿತ.

2013ರ ಲೋಕಸಭೆ ಉಪಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಜಯಭೇರಿ ಬಾರಿಸಿದ್ದ ರಮ್ಯಾ, ಆನಂತರ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡ ಬಳಿಕ ಸಕ್ರಿಯವಾಗಿ ಕಾಂಗ್ರೆಸ್ಸಿನ ಜವಾಬ್ದಾರಿ ಹೊತ್ತುಕೊಂಡ ಬಳಿಕ ಅವರು ಯಾವುದೇ ಸಿನಿಮಾದಲ್ಲೂ ನಟಿಸಿಲ್ಲ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!