
ನ್ಯೂಯಾರ್ಕ್(ಅ.14) ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಮಹಿಳೆಯರು ಮಿ ಟೂ ಅಭಿಯಾನ ನಡೆಸುತ್ತಿದ್ದು ಸಾಮೂಹಿಕವಾಗಿ ಧ್ವನಿ ಎತ್ತಿದ್ದಾರೆ. ಆದರೆ ಈ ಪ್ರಪಂಚದಲ್ಲಿ ಮಹಿಳೆಯರು ಮಾತ್ರ ಅಲ್ಲ,,ಪುರುಷರು ಸುರಕ್ಷಿತರಲ್ಲ. ಇದೇ ಕಾರಣಕ್ಕೆ ಅಮೆರಿಕಾದಲ್ಲಿ ಒಂದು ಅಭಿಯಾನ ಶುರುವಾಗಿದೆ.
ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಟ್ರಂಪ್ ಆಪ್ತ 58 ವರ್ಷದ ಬ್ರೆಟ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಹಲವರು ಆತಂಕ ವ್ಯಕ್ತಪಡಿಸಿದ್ದರು.
ಅಮೆರಿಕಾದಲ್ಲಿ ಪೀಟರ್ ಹಾನ್ಸ್ಸನ್ಸ್ ಎನ್ನುವವರ ತಾಯಿ ಸಾಮಾಜಿಕ ಜಾಲತಾಣದಲ್ಲಿ ನನ್ನ ಮಗನ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿಯೂ ಇಂತಹ ವ್ಯವಸ್ಥೆ ಇದೆ ನೋಡಿ. ಲೈಂಗಿಕ ದೌರ್ಜನ್ಯದಿಂದಾಗಿ ನನ್ನ ಮಗ ಡೇಟಿಂಗ್ಗೆ ಹೋಗಲು ಹೆದರುತ್ತಾರೆ ಎಂದು ಬರೆದು ಹಿಮ್ ಟೂ ಎನ್ನುವ ಹ್ಯಾಶ್ ಟ್ಯಾಗ್ನೊಂದಿಗೆ ಪೋಸ್ಟ್ ಮಾಡಿದ್ದರು ಇದೀಗ ಈ ಹ್ಯಾಶ್ ಟ್ಯಾಗ್ ಸಹ ಜನಪ್ರಿಯವಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.