
ಚಂಡೀಗಢ : ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿ ರಚಿಸಿದ್ದ 8 ಸಲಹಾ ಸಮಿತಿಗಳಿಂದ ಹೊರ ನಡೆದಿದ್ದಾರೆ.
ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರೊಂದಿಗೆ ವೈಮನಸ್ಸಿನ ಕಾರಣದಿಂದ ಇದೀಗ ಈ ನಿರ್ಧಾರ ಮಾಡಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಆರಂಭವಾಗಿದ್ದ ಇಬ್ಬರ ನಡುವಿನ ವೈಮನಸ್ಯ ಇದೀಗ ಈ ಹಂತಕ್ಕೆ ತಲುಪಿದೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸಿಧು ಹೊಣೆ ಮಾಡಿ ಅವರಿಗೆ ನೀಡಿದ್ದ ಪೌರಾಡಳಿತ ಖಾತೆಯನ್ನು ವಾಪಸ್ ಪಡೆದಿದ್ದ ಸಿಎಂ ಅಮರೀಂದರ್ ಸಿಂಗ್ ಇಂಧನ ಖಾತೆಯನ್ನು ನೀಡಿದ್ದರು.
ಇದರಿಂದ ಅಸಮಾಧಾನಗೊಂಡಿದ್ದ ಸಿಧು ಸಿಎಂ ಕರೆದಿದ್ದ ಸಂಪುಟ ಸಭೆಗೂ ಗೈರಾಗುವ ಮೂಲಕ ಅಸಮಾಧಾನ ಹೊರಹಾಕಿದ್ದರು. ಇದೀಗ ಮುಖ್ಯಮಂತ್ರಿಗಳಿಂದ ರಚನೆಯಾಗಿದ್ದ 8 ಸಲಹಾ ಸಮಿತಿಗಳಿಂದ ಹೊರ ನಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.