
ನವದೆಹಲಿ (ಫೆ. 01): 2017 ರ ಬಜೆಟನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸುತ್ತಿದ್ದಾರೆ. ಜನರ ನಿರೀಕ್ಷೆಗಳನ್ನು ಪೂರೈಸಲು ನಾವು ಇನ್ನಷ್ಟು ಕೆಲಸ ಮಾಡುವ ಅಗತ್ಯವಿದೆ. ಹಾಗಾಗಿ ಮುಂದಿನ ವರ್ಷ ನಾವು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಜೇಟ್ಲಿ ಹೇಳಿದ್ದಾರೆ. 3 ಪ್ರಮುಖ ಉದ್ದೇಶವನ್ನು ಇಟ್ಟುಕೊಂಡು ದೇಶದ ಆರ್ಥಿಕ ಪ್ರಗತಿಗೆ ಶ್ರಮಿಸಲಾಗುವುದು ಎಂದಿದ್ದಾರೆ.
ಪರಿವರ್ತನೆ/ಟೆಕ್ ಇಂಡಿಯಾ- ಆಡಳಿತ ವ್ಯವಸ್ಥೆಯನ್ನು ಸುಧಾರಿಸುವುದು ಮತ್ತು ಬಡವರ ಜೀವನ ಮಟ್ಟವನ್ನು ಹೆಚ್ಚಿಸುವುದು.
ಬಲವರ್ಧನೆ- ಸಮಾಜದ ವಿವಿಧ ವಲಯಗಳನ್ನು ಬಲವರ್ಧನೆ ಮಾಡುವುದು ಉದ್ದೇಶ. ವಿಶೇಷವಾಗಿ ಯುವಜನತೆ ಮತ್ತು ದುರ್ಬಲ ವರ್ಗದವರ ಆದ್ಯತೆ ನೀಡಲಾಗುವುದು.
ಸ್ವಚ್ಚ ಭಾರತ- ದೇಶವನ್ನು ಪಿಡುಗುಗಳಿಂದ, ಕಪ್ಪುಹಣದಿಂದ, ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.