
ಬೆಂಗಳೂರು(ಫೆ.07): ಪ್ರಗತಿಪರ ಹೋರಾಟಗಾರ ಅಗ್ನಿ ಶ್ರೀಧರ್'ಗೆ ಲಘು ಹೃದಯಾಘಾತವಾಗಿ ಹೆಚ್ಚಿನ ಚಿಕಿತ್ಸೆಗಾಗಿ ಸಾಗರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಡಬಗೆರೆ ಸೀನನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ನಲ್ಲಿರುವ ಶ್ರೀಧರ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಪೊಲೀಸರ ವಿಚಾರಣೆ ವೇಳೆ ಬಿಕ್ಕಿ ಬಿಕ್ಕಿ ಅಳುತ್ತಿದ್ದಾಗ ಲಘು ದಯಾಘಾತವಾಗಿದೆ. ಪ್ರಕರಣದಲ್ಲಿ ನನ್ನ ಕೈವಾಡವಿಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಸೀನನ ಹತ್ಯೆ ಆರೋಪಿ ರೋಹಿತ್ ಅಲಿಯಾಸ್ ಒಂಟೆ ಶ್ರೀಧರ್ ಅವರ ಮನೆಯಲ್ಲಿ ಅಡಗಿರುವ ಶಂಕೆಯಲ್ಲಿ ಸರ್ಚ್ ವಾರಂಟ್'ನೊಂದಿಗೆ ಐವರು ಡಿಸಿಪಿ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಶ್ರೀಧರ್ ಆಪ್ತ ಬಚ್ಚನ್ ಅಲಿಯಾಸ್ ಸಯ್ಯದ್ ಅಮಾನುಲ್ಲನನ್ನು ಪೊಲೀಸರು ಬಂಧಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.