
ಹೈದರಾಬಾದ್(ನ.09): ಇದೇ 28ರಿಂದ 2018ರ ಜನವರಿ 7ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಭಿಕ್ಷೆ ಬೇಡುವವರನ್ನು ತೆರವುಗೊಳಿಸಲು ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.
’ಎಂಟನೇ ಜಾಗತಿಕ ಉದ್ಯಮಶೀಲತಾ ಶೃಂಗಸಭೆ–2017‘ ನಡೆಯುವ ಕಾರಣದಿಂದ ಆದೇಶ ಹೊರಬಿದ್ದಿದೆ. ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಗಳು ಇವಾಂಕಾ ಟ್ರಂಪ್ ಭಾಗವಹಿಸಲಿದ್ದಾರೆ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಭಿಕ್ಷುಕರ ಹಾವಳಿ ಹೆಚ್ಚಿರುವ ಕಾರಣ ಈ ಕ್ರಮ ಜರುಗುಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಪೊಲೀಸರ ಆದೇಶದ ಪ್ರಕಾರ ಇಂದು ಬೆಳಗ್ಗೆಯಿಂದ 2018 ಜನವರಿ 7ರವರೆಗೆ ಭಿಕ್ಷುಕರು ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳುವಂತಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.