
ಚೆನ್ನೈ(ಅ.06): ತಲೆ ಮೇಲೆ ಬ್ಯಾನರ್ ಬಿದ್ದು ಮಹಿಳಾ ಟೆಕ್ಕಿಯೋರ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಎಐಎಡಿಎಂಕೆ ಹಿರಿಯ ನಾಯಕ ಸಿ. ಪೊನ್ನಯನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಟೆಕ್ಕಿ ಶುಭಶ್ರೀ ರವಿ ಸಾವಿಗೆ ಕಾರಣವಾದ ಬ್ಯಾನರ್ ಬೀಳಲು ಗಾಳಿ ಕಾರಣವಾಗಿದ್ದು, ಗಾಳಿಯ ಮೇಲೆ ಪ್ರಕರಣ ದಾಖಲಿಸಿಕೊಳ್ಳಿ ಎಂದು ಪೊನ್ನಯನ್ ಉಡಾಫೆಯ ಮಾತುಗಳನ್ನಾಡಿದ್ದಾರೆ.
ಎಐಎಡಿಎಂಕೆ ನಾಯಕ ಹಾಗೂ ಮಾಜಿ ಕೌನ್ಸಿಲರ್ ಜಯಗೋಪಾಲ್ ತಮ್ಮ ಪುತ್ರನ ಮದುವೆಗಾಗಿ ಅಳವಡಿಸಿದ್ದ ಬ್ಯಾನರ್ ಕುಸಿದು ಬಿದ್ದು ಶುಭಶ್ರೀ ಮೃತಪಟ್ಟಿದ್ದರು. ಅನುಮತಿ ಪಡೆಯದೇ ಬ್ಯಾನರ್ ಹಾಕಿದ ಆರೋಪದ ಮೇಲೆ ಜಯಗೋಪಾಲ್ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸದ್ಯ ಪೊನ್ನಯನ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ರಾಜಕೀಯವಾಗಿ ಮಾಗಿರುವ ನಾಯಕನಿಂದ ಇಂತಹ ಹೇಳಿಕೆ ಬರಬಾರದಿತ್ತು ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.