(ವಿಡಿಯೋ) ಲೈವ್ ಮರ್ಡ್'ರ್'ಗೆ ಬೆಚ್ಚಿ ಬಿತ್ತು ತಮಿಳುನಾಡು: ನಡುರಸ್ತೆಯಲ್ಲೇ ಕೊಚ್ಚಿ ಕೊಚ್ಚಿ ಕೊಲೆ!

Published : Feb 12, 2017, 10:40 AM ISTUpdated : Apr 11, 2018, 12:56 PM IST
(ವಿಡಿಯೋ) ಲೈವ್ ಮರ್ಡ್'ರ್'ಗೆ ಬೆಚ್ಚಿ ಬಿತ್ತು ತಮಿಳುನಾಡು: ನಡುರಸ್ತೆಯಲ್ಲೇ ಕೊಚ್ಚಿ ಕೊಚ್ಚಿ ಕೊಲೆ!

ಸಾರಾಂಶ

ಇತ್ತೀಚಿನವರೆಗೂ ತಿರುವಣ್ಣಾಮಲೈ ನ ಪಟ್ಟಣ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ರಾಜಕೀಯ ಬಿಕ್ಕಟ್ಟು ಮಧ್ಯೆಯೇ ತಮಿಳುನಾಡಲ್ಲಿ ಹಾಡಹಗಲೇ ಮರ್ಡರ್​​ ನಡೆದಿದೆ. ಈ ಲೈವ್​​ ಮರ್ಡರ್​​ಗೆ ತಮಿಳುನಾಡು ಬೆಚ್ಚಿಬಿದ್ದಿದೆ. ತಿರುವಣ್ಣಾಮಲೈನಲ್ಲಿ ಎಐಎಡಿಎಂಕೆ ಸದಸ್ಯನ ಬರ್ಬರ ಹತ್ಯೆಯಾಗಿದೆ. ಎಸ್ ಕನಕರಾಜ್ ಎಂಬುವರನ್ನು ನಡುರಸ್ತೆಯಲ್ಲೇ ಹತ್ಯೆ ಮಾಡಲಾಗಿದೆ. ಇತ್ತೀಚಿನವರೆಗೂ ತಿರುವಣ್ಣಾಮಲೈ ನ ಪಟ್ಟಣ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಕನಕರಾಜ್ ಹತ್ಯೆ ನಡೆದಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ ಬ್ಯಾಡ್ಮಿಂಟನ್ ಆಟ ಆಡಿ ವಾಪಸ್ಸಾಗುತ್ತಿದ್ದ ವೇಳೆ ಬೈಕಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿರುವವರು ಡಿಎಂಕೆ ಬೆಂಬಲಿಗರು ಎಂದು ಹೇಳಲಾಗುತ್ತಿದ್ದು, ಆರೋಪಿಗಳಾದ ಬಾಬು, ರಾಜಾ, ಸರವಣನ್, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ತಿರುವಣ್ಣಾಮಲೈ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ರಸ್ತೆ-ಚರಂಡಿ ನಿರ್ಮಾಣದಿಂದ ಬಡವರು ಉದ್ದಾರ ಆಗ್ತಾರಾ?' ಗ್ಯಾರಂಟಿ ಸ್ಕೀಂ ಟೀಕೆಗೆ ಗೃಹಸಚಿವ ಪರಂ ತಿರುಗೇಟು!
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ