ಪಕ್ಷದ ಚಿಹ್ನೆಗಾಗಿ ಲಂಚ ನೀಡಿದ ಆರೋಪ :ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ವಿರುದ್ಧ ಎಫ್'ಐಆರ್

Published : Apr 16, 2017, 02:41 PM ISTUpdated : Apr 11, 2018, 12:56 PM IST
ಪಕ್ಷದ ಚಿಹ್ನೆಗಾಗಿ ಲಂಚ ನೀಡಿದ ಆರೋಪ :ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ವಿರುದ್ಧ  ಎಫ್'ಐಆರ್

ಸಾರಾಂಶ

ಪಕ್ಷದ ಎರಡೆಲೆ ಚಿಹ್ನೆ ಉಳಿಸಿಕೊಳ್ಳಲು ಲಂಚ ನೀಡಿದ ಆರೋಪದಡಿ ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ದಿನಕರನ್ ವಿರುದ್ಧ ದೆಹಲಿ ಕ್ರೈಂ ಬ್ರಾಂಚ್​ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಪಕ್ಷದ ಚಿಹ್ನೆಗಾಗಿ ಲಂಚ ನೀಡಿದ ಆರೋಪವನ್ನ ದಿನಕರನ್​ ವಿರುದ್ಧ ಪೊಲೀಸರು ಹೊರಿಸಿದ್ದಾರೆ. ಮಧ್ಯವರ್ತಿಯಾಗಿದ್ದ  ಸುಖೇಶ್'ನನ್ನ ದೆಹಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನವದೆಹಲಿ(ಏ.17): ಅಕ್ರಮ ಆಸ್ತಿ ಸಂಪಾದನೆ ಆರೋಪ ಹೊತ್ತು ಜೈಲುಪಾಲಾಗಿರುವ ಶಶಿಕಲಾ ಸಂಬಂಧಿ ದಿನಕರನ್​ ವಿರುದ್ಧ ದೆಹಲಿ ಪೊಲೀಸರು ಎಫ್'ಐ'ಆರ್ ದಾಖಲಿಸಿದ್ದಾರೆ.

ಪಕ್ಷದ ಎರಡೆಲೆ ಚಿಹ್ನೆ ಉಳಿಸಿಕೊಳ್ಳಲು ಲಂಚ ನೀಡಿದ ಆರೋಪದಡಿ ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ದಿನಕರನ್ ವಿರುದ್ಧ ದೆಹಲಿ ಕ್ರೈಂ ಬ್ರಾಂಚ್​ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಪಕ್ಷದ ಚಿಹ್ನೆಗಾಗಿ ಲಂಚ ನೀಡಿದ ಆರೋಪವನ್ನ ದಿನಕರನ್​ ವಿರುದ್ಧ ಪೊಲೀಸರು ಹೊರಿಸಿದ್ದಾರೆ. ಮಧ್ಯವರ್ತಿಯಾಗಿದ್ದ  ಸುಖೇಶ್'ನನ್ನ ದೆಹಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ದೆಹಲಿಯ ಹೋಟೆಲ್​ವೊಂದರಲ್ಲಿ ಸುಖೇಶ್​ ತಂಗಿದ್ದಾಗ ಪೊಲೀಸರು ರೇಡ್​ ಮಾಡಿ 1.3 ಕೋಟಿ ಹಣವನ್ನ ವಶಪಡಿಸಿಕೊಂಡಿದ್ದಾರೆ. ಜತೆಗೆ  2 ಐಷರಾಮಿ  ಕಾರ್​'ಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆ ಬಳಿಕ ಟಿಟಿವಿ ದಿನಕರನ್​ಗೆ ಸಮನ್ಸ್​ ಜಾರಿ ಮಾಡಿರುವ ದೆಹಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.  

ಇನ್ನು ತಮ್ಮ ವಿರುದ್ಧದ ಆರೋಪವನ್ನು ಧಿನಕರ್​ನ ತಳ್ಳಿಹಾಕಿದ್ದಾರೆ. ಪಕ್ಷದ ಚಿಹ್ನೆಗಾಗಿ ನಾನು ಯಾರಿಗೂ ಹಣ ಕೊಟ್ಟಿಲ್ಲ.  ಬಂಧಿತ ಮನೋಜ್​ ಯಾರು ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಿಂದೂಗಳಿಗಿಂತ ಮುಸ್ಲಿಮರ ಮೇಲೆ ಹೆಚ್ಚು ಬಾಂಡ್: ಎಸ್‌ಡಿಪಿಐ ಆರೋಪಕ್ಕೆ ಅಂಕಿ-ಅಂಶ ಸಮೇತ ಕಮಿಷನರ್ ತಿರುಗೇಟು!
ಕರೆಂಟ್‌ ಅಕೌಂಟಲ್ಲಿ ₹150 ಕೋಟಿ ಅಲ್ಲ, ₹1 ಸಾವಿರ ಕೋಟಿ ವಹಿವಾಟು