ಪಕ್ಷದಿಂದ ಶಶಿಕಲಾ ಉಚ್ಚಾಟನೆ : ಓ.ಪನ್ನೀರ್ ಸೆಲ್ವಂ ಮತ್ತೆ ಮುಖ್ಯಮಂತ್ರಿ !

Published : Apr 18, 2017, 11:55 AM ISTUpdated : Apr 11, 2018, 01:10 PM IST
ಪಕ್ಷದಿಂದ  ಶಶಿಕಲಾ ಉಚ್ಚಾಟನೆ : ಓ.ಪನ್ನೀರ್ ಸೆಲ್ವಂ ಮತ್ತೆ ಮುಖ್ಯಮಂತ್ರಿ !

ಸಾರಾಂಶ

ಅಮ್ಮನ ಆಸೆಯಂತೆ ನಾವೆಲ್ಲರೂ ಒಂದಾಗುತ್ತಿದ್ದೇವೆ ಎಂದು ಹಣಕಾಸು ಸಚಿವ ಜಯಕುಮಾರ್​ ತಿಳಿಸಿದ್ದಾರೆ.

ಚೆನ್ನೈ(ಏ.18): ತಮಿಳುನಾಡಿನಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿದ್ದು, ಸದ್ಯ ಬೆಂಗಳೂರಿನ ಸೆರೆಮನೆಯಲ್ಲಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಹಾಗೂ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ. ದಿನಕರನ್  ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಎಲ್ಲರೂ ಒಂದಾಗಿ ನಿರ್ಧಾರ ತೆಗೆದುಕೊಂಡಿದ್ದೇವೆ. ಎಐಎಡಿಎಂಕೆಯ ಎಲ್ಲಾ 123 ಶಾಸಕರು ಒಗ್ಗಟ್ಟಾಗಿದ್ದೇವೆ. ಎಲ್ಲರೂ ಒಂದಾಗಿ ನಿರ್ಧಾರ ತೆಗೆದುಕೊಂಡಿದ್ದೇವೆ. ಎಐಎಡಿಎಂಕೆ ಪಕ್ಷ ಇಬ್ಭಾಗವಾಗುವುದು ನಮಗೆ ಇಷ್ಟವಿಲ್ಲ. ನಮಗೆ ಎರಡೆಲೆ ಚಿಹ್ನೆ ಬೇಕು. ಅಮ್ಮನ ಆಸೆಯಂತೆ ನಾವೆಲ್ಲರೂ ಒಂದಾಗುತ್ತಿದ್ದೇವೆ ಎಂದು ಹಣಕಾಸು ಸಚಿವ ಜಯಕುಮಾರ್​ ತಿಳಿಸಿದ್ದಾರೆ.

ಸಭೆಯಲ್ಲಿ ಎರಡು ಬಣಗಳ ವಿಲೀನ ಸೂತ್ರ ಸಿದ್ಧವಾಗಿದ್ದು ಪನ್ನೀರ್ ಸೆಲ್ವಂ ಮತ್ತೆ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಿದೆ. ಸಿಎಂ ಸ್ಥಾನ ನೀಡದಿದ್ದರೆ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿ ಪಳನಿಸ್ವಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ: ಅಹವಾಲು ಹೇಳಲು ಚೇಂಬರ್‌ಗೆ ಬಂದ ರೈತರನ್ನು ಅವಮಾನಿಸಿದ ಸಚಿವ ಮಧು ಬಂಗಾರಪ್ಪ
ಜೀವ ವಿಮೆಗಾಗಿ ಜೀವ ತೆಗೆದ: ಲಿಫ್ಟ್ ಕೇಳಿದ್ದೇ ತಪ್ಪಾಯ್ತು: ಹಂತಕ ಸಿಕ್ಕಿಬಿದ್ದಿದ್ದು ಹೇಗೆ?