
ಚೆನ್ನೈ(ಡಿ.): ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಮುಖ್ಯಮಂತ್ರಿ ದಿವಗಂತ ಜಯಲಲಿತಾ ಆಪ್ತೆ ಶಶಿಕಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಪಕ್ಷದ ಪಕ್ಷದ ಸಾಮಾನ್ಯ ಸಭೆಯಲ್ಲಿ ಶಶಿಕಲಾ ಆಯ್ಕೆಯಾದ ಬಗ್ಗೆ ನಿರ್ಣಯವನ್ನು ಅಂಗೀಕರಿಸಲಾಯಿತು.
ಜಯಲಲಿತಾ ಅವರಿಗೆ ಸಂತಾಪ ಸೂಚಿಸಿದ ನಂತರ ಎಐಎಡಿಎಂಕೆ ಪಕ್ಷದ ಅಧ್ಯಕ್ಷ ಇ. ಮಧುಸೂಧನ್ ಹಾಗೂ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಮುಂತಾದ ನಾಯಕರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.
ಪಕ್ಷದ ನಂ 20 ರ ಹಾಗೂ ಸೆಕ್ಷನ್ 2 ನಿಯಮದ ಅನ್ವಯ ಶಶಿಕಲಾ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ'. ಈ ನಿರ್ಣಯದ ಪ್ರಕಾರ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರು ಪಕ್ಷದ ಎಲ್ಲ ಅಧಿಕಾರವನ್ನು ಹೊಂದಿರಲಿದ್ದಾರೆ' ಎಂದು ಸಭೆಯಲ್ಲಿ ನಿರ್ಣಯವನ್ನು ಓದಲಾಯಿತು.
ಜಯಲಲಿತಾ ಸಾವಿನ ನಂತರ ನಡೆದ ಮೊದಲ ಪಕ್ಷದ ಸಭೆ ಇದಾಗಿದೆ. ತಮಿಳುನಾಡಿನ ಎಲ್ಲ ಜಿಲ್ಲೆಯ ಪಕ್ಷದ ಅಧ್ಯಕ್ಷರು ಹಾಗೂ ಹಲವು ಸಂಘಟನೆಗಳು ಶಶಿಕಲಾ ಅವರನ್ನೇ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸ ಬೇಕೆಂದು ಒತ್ತಾಯಿಸಿದ್ದವು.
ಶಶಿಕಲಾ ಅವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಂಭವ ಹೆಚ್ಚಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.