ಎಸ್ಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಖಿಲೇಶ್ ಯಾದವ್ ಆಯ್ಕೆ

By Suvarna Web DeskFirst Published Jan 1, 2017, 8:15 AM IST
Highlights

ಪಕ್ಷವು ಅಖಿಲೇಶ್ ಯಾದವ್ ಅವರನ್ನು ಎಸ್'ಪಿಯ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ ಎಂದ ಅವರು, ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಶಿವಪಾಲ್ ಸಿಂಗ್ ಯಾದವ್ ಅವರ ತಪ್ಪು ನಿರ್ಧಾರಗಳನ್ನು ಟೀಕಿಸಿದರು.

ನವದೆಹಲಿ(ಜ.1): ಮತ್ತೊಂದು ನಾಟಕೀಯ ಬೆಳವಣಿಗೆಳ ಹಿನ್ನಲೆಯಲ್ಲಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಭಾನುವಾರ ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಪಕ್ಷದ ಮುಖಂಡರಾದ ರಾಮ್'ಗೋಪಾಲ್ ಯಾದವ್ ಮಾತನಾಡಿ, ಪಕ್ಷವು ಅಖಿಲೇಶ್ ಯಾದವ್ ಅವರನ್ನು ಎಸ್'ಪಿಯ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ ಎಂದ ಅವರು, ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಶಿವಪಾಲ್ ಸಿಂಗ್ ಯಾದವ್ ಅವರ ತಪ್ಪು ನಿರ್ಧಾರಗಳನ್ನು ಟೀಕಿಸಿದರು.

ಅಮರ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಚಾಟಿಸಲು ಹಾಗೂ ಶಿವಪಾಲ್ ಯಾದವ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಲು ಕಾರ್ಯಕಾರಣಿ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದ ಅವರು ವರಿಷ್ಠರಾದ ಮುಲಾಯಂ ಸಿಂಗ್ ಯಾದವ್ ಪಕ್ಷದ ಮಾರ್ಗದರ್ಶಕರಾಗಿ ಮುನ್ನಡೆಸಲಿದ್ದಾರೆ ಎಂದು ರಾಮ್ ಗೋಪಾಲ್ ಯಾದವ್ ತಿಳಿಸಿದರು.

ಮುಲಾಯಂ ಸಿಂಗ್ ಯಾದವ್ ಅವರು ಡಿ.30 ರಂದು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಿ ನಂತರ ಡಿ.31 ರಂದು ಉಚ್ಚಾಟನೆಯನ್ನು ರದ್ದುಗೊಳಿಸಿದ್ದರು.

ಪಕ್ಷದ ಸಭೆಯಲ್ಲಿ ಮಾತನಾಡಿದ ಅಖಿಲೇಶ್ ಯಾದವ್' ತಮಗೂ ಹಾಗೂ ತಮ್ಮ ತಂದೆಯವರಿಗೂ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಾನು ಅವರನ್ನು ಯಾವಾಗಲು ಗೌರವಿಸುತ್ತೇನೆ' ಎಂದಿದ್ದಾರೆ.

click me!