
ಲಖನೌ(ಮೇ.20): ಉತ್ತರ ಪ್ರದೇಶದ ಹಿಂದಿನ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾರ, ನಿರುದ್ಯೋಗಿಗಳಿಗೆ 20 ಕೋಟಿ ರೂಪಾಯಿ ಮೊತ್ತದ ಚೆಕ್ ವಿತರಿಸಲು 15 ಕೋಟಿ ರುಪಾಯಿ ದುಂದು ವೆಚ್ಚ ಮಾಡಿದೆ ಎಂದು ಸಿಎಜಿ ವರದಿ ನೀಡಿದೆ.
ಬೇರೋಜ್'ಗಾರಿ ಭತ್ತಾ ಯೋಜನೆ ಅಡಿಯಲ್ಲಿ 1.26 ಲಕ್ಷ ಫಲಾನುಭವಿಗಳಿಗೆ ಚೆಕ್ ವಿತರಣೆಯ ಕಾರ್ಯಕ್ರಮಗಳಲ್ಲಿ ಆಸನ, ತಿಂಡಿ, ಇತರ ಸೌಕರ್ಯಕ್ಕಾಗಿ 8 ಕೋಟಿ ರುಪಾಯಿ ವ್ಯಯಿಸಿದೆ.
ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಬೇಕಿತ್ತಾದರೂ, ಫಲಾನುಭವಿಗಳನ್ನು ಕಾರ್ಯಕ್ರಮ ನಡೆಯುವ ಜಾಗಕ್ಕೆ ಕರೆತರಲು 7 ಕೋಟಿ ರುಪಾಯಿ ವೆಚ್ಚ ಮಾಡಲಾಗಿದೆ.
ಸಾರ್ವಜನಿಕ ಹಣವನ್ನು ಈ ರೀತಿ ಅನಾವಶ್ಯಕವಾಗಿ ಅನುತ್ಪಾದಕ ಕೆಲಸಕ್ಕೆ ಬಳಸುವುದು ಸರಿಯಲ್ಲ ಎಂದು ಸಿಎಜಿ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.