
ನವದೆಹಲಿ (ಮಾ.09): ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಹಾವು-ಮುಂಗುಸಿಗಳಂತೆ ಕಚ್ಚಾಡುತ್ತಿದ್ದ ಎಸ್ಪಿ-ಬಿಎಸ್ಪಿ ಜಗಳವನ್ನು ಕೈಬಿಟ್ಟು ಮೈತ್ರಿ ಮಾಡಿಕೊಳ್ಳಲು ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಶತಯಗತಾಯ ಭಾರತೀಯ ಜನತಾ ಪಕ್ಷವನ್ನು ಮಣ್ಣು ಮುಕ್ಕಿಸಬೇಕೆಂದು ರಣತಂತ್ರ ಹೆಣೆಯುತ್ತಿವೆ. ಆದರೆ ಈ ಬಗ್ಗೆ ಅಖಿಲೇಶ್ ಯಾದವ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
“ಮೈತ್ರಿಯ ಬಗ್ಗೆ ಈಗೇನೂ ಹೇಳಲು ಸಾಧ್ಯವಿಲ್ಲ. ಈ ಬಾರಿ ಚುನಾವಣೆಯಲ್ಲಿ ಬಹುಮತದೊಂದಿಗೆ ಗೆಲ್ಲುತ್ತೇವೆಂಬ ವಿಶ್ವಾಸ ನನಗಿದೆ. ನಮ್ಮ ಹಾಗೂ ಬಿಎಸ್ಪಿ ಮೈತ್ರಿ ಬಗ್ಗೆ ವದಂತಿಗಳಿವೆ. ಚುನಾವಣಾ ಫಲಿತಾಂಶದ ನಂತರದ ಸ್ಥಿತಿ ಬಗ್ಗೆ ನಮಗೆ ಗೊತ್ತಿಲ್ಲ. ಸರ್ಕಾರ ರಚಿಸಲು ಅಗತ್ಯ ಬಿದ್ದರೆ ನೋಡೋಣ. ರಾಷ್ಟ್ರಪತಿ ಆಳ್ವಿಕೆಯನ್ನು ಯಾರೂ ಇಷ್ಟಪಡುವುದಿಲ್ಲ” ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.