
ನವದೆಹಲಿ (ನ.26): ದೊಡ್ಡ ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿರುವ ಸರ್ಕಾರದ ಜನವಿರೋಧಿ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ‘ಆಕ್ರೋಶ ದಿನ’ವನ್ನು ಆಚರಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಝಾದ್ ಹೇಳಿದ್ದಾರೆ.
ನಮ್ಮ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಳ್ಳುವವರೆಗೆ ನಾವು ಒತ್ತಡವನ್ನು ಹೇರುತ್ತೇವೆ. ಯಾರಿಗೂ ಹಾನಿಯನ್ನುಂಟುಮಾಡದೇ ನಮ್ಮ ಆಕ್ರೋಶವನ್ನು ಶಾಂತಿಯುತವಾಗಿ ವ್ಯಕ್ತಪಡಿಸುತ್ತೇವೆ. ನೋಟುಗಳನ್ನು ಅಮಾನ್ಯ ಮಾಡಿರುವ ಸರ್ಕಾರದ ಜನವಿರೋಧಿ ಕ್ರಮದ ವಿರುದ್ಧ ನಾವು ಪ್ರತಿಭಟಿಸುತ್ತೇವೆ, ಎಂದು ಆಝಾದ್ ಹೇಳಿದ್ದಾರೆ.
ಸರ್ಕಾರದ ಕ್ರಮದಿಂದ ದೇಶದಲ್ಲಿ ಹಿಂದೆಂದೂ ಕಂಡದ ಅರಾಜಕತೆ ಸೃಷ್ಟಿಯಾಗಿದೆ. ದೇಶದ ಆರ್ಥಿಕತೆಯನ್ನು ನಾಶಮಾಡುವ ಯೋಜನೆಯನ್ನು ಸರ್ಕಾರ ಕೈಗೊಂಡಿದೆ, ಎಂದು ಅವರು ಹೇಳಿದ್ದಾರೆ.
ನೋಟು ಅಮಾನ್ಯ ಮಾಡಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿ ಪ್ರತಿಪಕ್ಷಗಳು ನ.28ರಂದು ‘ಆಕ್ರೋಶ ದಿನ’ದ ಹೆಸರಿನಲ್ಲಿ ಭಾರತ ಬಂದ್’ಗೆ ಕರೆ ನೀಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.