'ಭಾರತ್ ಕೇ ವೀರ್' ಗೀತೆಗೆ ಚಾಲನೆ, ನಮ್ಮ ಸೈನಿಕರಿಗಾಗಿ 12 ಕೋಟಿ ರೂ.ಸಂಗ್ರಹ

Published : Jan 21, 2018, 01:18 PM ISTUpdated : Apr 11, 2018, 01:05 PM IST
'ಭಾರತ್ ಕೇ ವೀರ್' ಗೀತೆಗೆ ಚಾಲನೆ, ನಮ್ಮ ಸೈನಿಕರಿಗಾಗಿ 12 ಕೋಟಿ ರೂ.ಸಂಗ್ರಹ

ಸಾರಾಂಶ

ಹುತಾತ್ಮರ ಕುಟುಂಬದ ಕ್ಷೇಮಾಭಿವೃದ್ಧಿಗಾಗಿ ಆರಂಭವಾದ 'ಭಾರತ್ ಕೇ ವೀರ್' ಅಭಿಯಾನದ ಗೀತೆಗೆ ಚಾಲನೆ ನೀಡಿದ್ದು, ಈ ಕಾರ್ಯಕ್ರಮದಲ್ಲಿ  12.93 ಕೋಟಿ ರೂ. ಸಂಗ್ರಹಿಸಲಾಗಿದೆ.

ಹೊಸದಿಲ್ಲಿ: ಹುತಾತ್ಮರ ಕುಟುಂಬದ ಕ್ಷೇಮಾಭಿವೃದ್ಧಿಗಾಗಿ ಆರಂಭವಾದ 'ಭಾರತ್ ಕೇ ವೀರ್' ಅಭಿಯಾನದ ಗೀತೆಗೆ ಚಾಲನೆ ನೀಡಿದ್ದು, ಈ ಕಾರ್ಯಕ್ರಮದಲ್ಲಿ  12.93 ಕೋಟಿ ರೂ. ಸಂಗ್ರಹಿಸಲಾಗಿದೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ ನೇತೃತ್ವದಲ್ಲಿ ಆರಂಭವಾದ ಈ ಅಭಿಯಾನದಲ್ಲಿ ಸಂಗ್ರಹವಾದ ಹಣವನ್ನು ಹುತಾತ್ಮರ ಕುಟುಂಬಕ್ಕೆ ಹಾಗೂ ಸೈನಿಕರ ಮಕ್ಕಳ ಶಿಕ್ಷಣಕ್ಕೆ ಮೀಸಲಿಡಲಾಗುವುದು.

 

 

ಕೈಲಾಶ್ ಖೇರ್ ಸಂಗೀತ ಸಂಯೋಜಿಸಿ, ಹಾಡಿರುವ ಈ ಗೀತೆಯನ್ನು ಡೌನ್‌ಲೋಡ್ ಮಾಡಿಕೊಂಡಾಗ ಬಂದ ಹಣವೂ ಸೈನಿಕರ ಕುುಟಂಬದ ಅಗತ್ಯಗಳನ್ನು ಪೂರೈಸಲು ಬಳಸಲಾಗುವುದು. ಮೃತ ಸೈನಿಕರ ಕುಟುಂಬಕ್ಕೆ ಕನಿಷ್ಠ 1 ಕೋಟಿ ರೂ. ಸಿಗುವಂತೆ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ.

ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್, ಕೇಂದ್ರ ಸಚಿವರಾದ ಕಿರೆಣ್  ರಿಜಿಜು, ಹನ್ಸ್‌ರಾಜ್ ಅಹಿರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮುಂತಾದವರು ಉಪಸ್ಥಿತರಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!
ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ