
ಬಾಲಿವುಡ್ ನಟ ಅಕ್ಷಯ್ ಕುಮಾರ್ ಕಳೆದ ತಿಂಗಳು ಸುಕ್ಮಾ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ರೂ.1 ಕೋಟಿ ಸಹಾಯಧನ ನೀಡಿ ಮಾದರಿಯೆನಿಸಿದ್ದರು. ಈಗ ಸ್ವಚ್ಛ ಭಾರತ ಮಿಶನನ್ನು ಮುಂದಿಟ್ಟುಕೊಂಡು - ಟಾಯ್ಲೆಟ್ ಏಕ್ ಪ್ರೇಮ್ ಕಥಾ- ಎಂಬ ಸಿನೆಮಾವನ್ನು ಕೂಡಾ ಅಕ್ಷಯ್ ಕುಮಾರ್ ಹೊರತರುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಇಂದು ಮಧ್ಯಪ್ರದೇಶದ ಕಾರ್ಗೋನೆ ಜಿಲ್ಲೆಯ ಗ್ರಾಮವೊಂದರಲ್ಲಿ ಟಾಯ್ಲೆಟ್ ನಿರ್ಮಾಣಕ್ಕೆ ಹೊಂಡವನ್ನು ಅಕ್ಷಯ್ ಕುಮಾರ್ ಅಗೆದಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ತೋಮರ್ ಕೂಡಾ ಉಪಸ್ಥಿತರಿದ್ದು. ಟಾಯ್ಲೆಟ್ ಏಕ್ ಪ್ರೇಮ್ ಕಥಾ ಸಿನೆಮಾದಲ್ಲಿ ಭೂಮಿ ಪೆಡ್ನೇಕರ್ ನಟಿಸಿದ್ದು, ಆಗಸ್ಟ್ 11 ರಂದು ಬಿಡುಗಡೆಯಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.